ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ಬೃಹತ್ ಉದ್ಯೋಗ ( Job Fair) ಮತ್ತು ಶುಶಿಕ್ಷು ಮೇಳ ಆಯೋಜಿಸಲಾಗಿದೆ. 600ಕ್ಕೂ ಹೆಚ್ಚು ಉದ್ಯೋಗಾವಕಾಶಗಳಿದ್ದು, 20ಕ್ಕೂ ಹೆಚ್ಚು ಕಂಪೆನಿಗಳು ಇದರಲ್ಲಿ ಭಾಗವಹಿಸಲಿವೆ. ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಸುವರ್ಣಾವಕಾಶವಾಗಿದ್ದು, ಕೆಲ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿoಗ್, ಪದವಿ ಸ್ನಾತಕೋತ್ತರ ಪಡೆದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಮಂಗಳೂರಿನಲ್ಲಿ 200 ಸರ್ಕಾರಿ ಹುದ್ದೆಗಳಿಗೆ ನೇಮಕಾತಿ: SSLC, ITI, Bsc, Bcom ಆದವರು ಅರ್ಜಿ ಸಲ್ಲಿಸಬಹುದು:Apply Now
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉತ್ತರಕನ್ನಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕಾರವಾರ ಸರ್ಕಾರಿ ಐಟಿಐ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಕುಮಟಾದ ಹೊಸ Bus stand ಹಿಂಭಾಗದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಈ ( Job Fair) ಮೇಳವನ್ನು ಆಗಸ್ಟ್ 29 ರಂದು ಆಯೋಜಿಸಲಾಗಿದೆ. ಈ ಕೆಳಗೆ ನೀಡಲಾದ ಗೂಗಲ್ ಫಾರ್ಮ್ ತುಂಬಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ನೋಂದಾವಣೆ ಬಳಿಕ ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆ, ಆಧಾರ್ ಕಾರ್ಡ್, ಬಯೋಡೆಟಾ ಹಾಗು ಭಾವಚಿತ್ರವನ್ನು ಸಂದರ್ಶನದ ವೇಳೆ ತೆಗೆದುಕೊಂಡು ಬರಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಸ್ಥಳ | ಉತ್ತರಕನ್ನಡ ಜಿಲ್ಲೆಯ ಕುಮಟಾ |
ದಿನಾಂಕ | ಆಗಸ್ಟ್ 29, 2023 |
ಹೆಸರು ನೋಂದಾಯಿಸಿಕೊಳ್ಳಲು | ಇಲ್ಲಿ ಕ್ಲಿಕ್ ಮಾಡಿ |
ಇನ್ನು ಹೆಚ್ಚಿನ ಉದ್ಯೋಗಾವಕಾಶ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್