KMF Recruitment: 46 ಹುದ್ದೆಗಳು: 21 ಸಾವಿರದಿಂದ 91 ಸಾವಿರದ ವರೆಗೆ ವೇತನ

10ನೇ ತರಗತಿ, ಪಿಯುಸಿ, ಪದವಿ ಆದವರು ಅರ್ಜಿ ಸಲ್ಲಿಸಿ

ಕೆಎಮ್‌ಎಫ್ ( KMF Recruitment) ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟ ಲಿಮಿಟೆಡ್ ನಲ್ಲಿ ಒಟ್ಟು 46 ಹುದ್ದೆಗಳು ಖಾಲಿಯಿದ್ದು, ಇವುಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳಿಗೆ ಅನುಗುಣವಾಗಿ ಆರಂಭಿಕ ವೇತನ 21 ಸಾವಿರದಿಂದ 91 ಸಾವಿರದ ವರೆಗೂ ಇದ್ದು, 10ನೇ ತರಗತಿ, ಪಿಯುಸಿ, ಪದವಿ ಆದ ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ಮಾಹಿತಿಯನ್ನು ನೀಡಲಾಗಿದೆ.

ಕಿರಿಯ ತಂತ್ರಜ್ಞರು, ತಾಂತ್ರಿಕ ಅಧಿಕಾರಿ, ಮಾರ್ಕೆಟಿಂಗ್ ಸಹಾಯಕ, ಜೂನಿಯರ್ ಸಿಸ್ಟಮ್ ಆಪರೇಟರ್ ಹೀಗೆ ಒಟ್ಟು 46 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಗಸ್ಟ್ 28, 2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಸೆಪ್ಟೆಂಬರ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. KMF Recruitment: ಅರ್ಜಿ ಸಲ್ಲಿಸುವ ವಿಧಾನ, ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

Apply for jobs at Karnataka Milk Federation, KMF

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದಕ್ಕೆ ಮಾತ್ರ ಅಭ್ಯರ್ಥಿ ಅಧಿಸೂಚನೆಯಲ್ಲಿ ನೀಡಲಾದ ಎಲ್ಲಾ ಮಾನದಂಡಗಳನ್ನು ಪೂರೈಸಿದ್ದಾರೆ ಎಂದು ಸೂಚಿಸುವುದಿಲ್ಲ .ಅರ್ಜಿಯನ್ನು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಅರ್ಜಿಗಳನ್ನು ಯಾವುದೇ ಸಮಯದಲ್ಲಿ ಅನರ್ಹ ಎಂದು ಕಂಡುಬ0ದಲ್ಲಿ ಅರ್ಜಿಯನ್ನು ತಿರಸ್ಕರಿಸಬಹುದು. ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡುವ ಮೊದಲು ಅಧಿಸೂಚನೆಯಲ್ಲಿ ನೀಡಿರುವ ಅರ್ಜಿ ಭರ್ತಿ ಮೊದಲು ಕುರಿತು ಸೂಚನೆಗಳು ಮತ್ತು ಅರ್ಹತಾ ಷರತ್ತುಗಳನ್ನು ಓದಿಕೊಳ್ಳಬೇಕು ಎಂದು ಅಧಿಕೃತ ವೆಬ್‌ಸೈಟಿನಲ್ಲಿ ಮಾಹಿತಿಯನ್ನು ನೀಡಲಾಗಿದೆ.

ಇಲಾಖೆ ಅಥವಾ ಕಂಪೆನಿKMF
ಒಟ್ಟು ಹುದ್ದೆಗಳು46
ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version