Big News
Trending

Ramakrishna Hegde:ರಾಮಕೃಷ್ಣ ಹೆಗಡೆ ಜನ್ಮದಿನಾಚರಣೆ: ಭಾವಚಿತ್ರಕ್ಕೆ ಪುಷ್ಪಾರ್ಚನೆ

ಸಿದ್ದಾಪುರ: ರಾಮಕೃಷ್ಣ ಹೆಗಡೆ (Ramakrishna Hegde) ಜನ್ಮದಿನಾಚರಣೆಯ ಪ್ರಯುಕ್ತ ಸಿದ್ದಾಪುರ ಪಟ್ಟಣ ಸಮೀಪದ ಎಂ.ಜಿ.ಸಿ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಚಿಂತನೆ ರಾಮಕೃಷ್ಣ ಹೆಗಡೆ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮ ನಡೆಯಿತು. ಗಣ್ಯರು ರಾಮಕೃಷ್ಣ ಹೆಗಡೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ ಸುಮಂಗಲ ವೈದ್ಯ, ಕರಿಯಮ್ಮ ಬರ್ಮಾ ನಾಯ್ಕ್, ಲತಾ ಮಂಗಲದ ಕಾಮತ್, ಜಯಂತಿ ಶಾನ್ ಭಾಗ್ ರವರನ್ನು ಸನ್ಮಾನಿಸಲಾಯಿತು. ಪ್ರಮೋದ್ ಹೆಗಡೆ ದಿಕ್ಸೂಚಿ ಭಾಷಣ ಮಾಡಿದರು, ಶಶಿಭೂಷಣ್ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರಾಮಕೃಷ್ಣ ಹೆಗಡೆ ಅಭಿಮಾನಿ ಬಳಗದ ವತಿಯಿಂದ ಶಿರಸಿಯ ಯಲ್ಲಾಪುರ ರಸ್ತೆಯ ನಾಕಾ ಸರ್ಕಲ್ ಬಳಿ ರಾಮಕೃಷ್ಣ ಹೆಗಡೆ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರಾಮಕೃಷ್ಣ ಹೆಗಡೆ (Ramakrishna Hegde)ಯವರ ಜನ್ಮ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್, ಪ್ರಮೋದ್ ಹೆಗಡೆ ಯಲ್ಲಾಪುರ, ವೆಂಕಟೇಶ್ ಹೆಗಡೆ ಹೊಸಬಾಳೆ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಉದ್ಯಮಿ ಶ್ರೀನಿವಾಸ ಹೆಬ್ಬಾರ್ ಇನ್ನು ಹಲವು ರಾಮಕೃಷ್ಣ ಗೆಳೆಯ ಅಭಿಮಾನಿಗಳು ಹಿರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ಸಿದ್ದಾಪುರ

Back to top button