Focus News
Trending

BGS Central School Mirjan: ಬಿಜಿಎಸ್ ಸೆಂಟ್ರಲ್ ಸ್ಕೂಲ್ ನಲ್ಲಿ ರಾಷ್ಟ್ರೀಯ ಕ್ರೀಡಾದಿನ ಆಚರಣೆ

ಕುಮಟಾ: ಮಿರ್ಜಾನಿನ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ, ಬಿಜಿಎಸ್ ಸೆಂಟ್ರಲ್ ಸ್ಕೂಲ್, ನಲ್ಲಿ (BGS Central School Mirjan) ರಾಷ್ಟ್ರೀಯ ಕ್ರೀಡಾದಿನವನ್ನು ಅತ್ಯಂತ ಸಂಭ್ರಮದಿoದ ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಬಿಜಿಎಸ್ ಸೆಂಟ್ರಲ್ ಸ್ಕೂಲಿನ ಆಡಳಿತಾಧಿಕಾರಿ ಜಿ. ಮಂಜುನಾಥರವರು “ಹಾಕಿ ಮಾಂತ್ರಿಕ” ಎಂದೇ ಖ್ಯಾತರಾಗಿದ್ದ ಧ್ಯಾನ್ ಚಂದ್ ರವರ ಜನ್ಮದಿನದ ಸವಿನೆನಪಿಗಾಗಿ ಸೆಪ್ಟೆಂಬರ್ 29ರಂದು ರಾಷ್ಟ್ರೀಯ ಕ್ರೀಡಾದಿನವನ್ನು ಆಚರಿಸುತ್ತೇವೆ.

ನಮ್ಮ ದೇಶದಲ್ಲಿ ಕ್ರೀಡೆಯ ಬೇರೆ ಬೇರೆ ವಿಭಾಗದಲ್ಲಿ ಆಟಗಾರರು ರಾಷ್ಟೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ಸ್ವಸ್ಥ ಶರೀರದಲ್ಲಿ ಸ್ವಸ್ಥ ಮನಸು ನೆಲೆಸುತ್ತದೆ ಎಂಬoತೆ ಕ್ರೀಡೆಯಿಂದ ದೈಹಿಕವಾಗಿ ಸದೃಢರಾಗುವುದಲ್ಲದೇ, ಮಾನಸಿಕವಾಗಿಯೂ ಸದೃಢರಾಗಲು ಸಾಧ್ಯ ಎಂದರು. (BGS Central School Mirjan) ಪ್ರಾಂಶುಪಾಲೆ ಲೀನಾ ಎಂ. ಗೊನೇಹಳ್ಳಿ ಮಾತನಾಡಿ ವಿದ್ಯಾರ್ಥಿಗಳು ಮುಂಬರುವ ಕದಂಬ ಸಹೋದಯ, ದಸರಾ ಕ್ರೀಡಾಕೂಟ ಮತ್ತು ಆದಿಚುಂಚನಗಿರಿ ಶಿಕ್ಷಣ ಟ್ಟಸ್ಟ್ ಪ್ರತಿ ವರ್ಷ ರಾಜ್ಯ ಮಟ್ಟದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ನಡೆಸುವ ಎಲ್ಲಾ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೇತರಾಗಿ ಎಂದು ಶುಭ ಹಾರೈಸಿದರು.

ದೈಹಿಕ ಶಿಕ್ಷಕರಾದ ಬಾಲಕೃಷ್ಣ ನಾಯಕ ರಾಷ್ಟ್ರೀಯ ಕ್ರೀಡಾದಿನದ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಅದ್ವಿತೀಯ ಸಾಧನೆ ಮಾಡಿದ ನಮ್ಮ ದೇಶದ ವಿವಿಧ ಕ್ರೀಡಾಪಟುಗಳ ಬಗ್ಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಕ್ರೀಡಾ ಭಾಷಣ ಸ್ಪರ್ಧೆಯಲ್ಲಿ ಕೌಶಿಕ್ ಹೆಗಡೆ ಪ್ರಥಮ, ರೋಶನಿ ನದಾಫ್ ದ್ವಿತೀಯ ಸ್ಥಾನ ಪಡದರು. ಕ್ರೀಡಾಂಗಣಗಳ ಮಾದರಿ ನಿರ್ಮಾಣ ಸ್ಪರ್ಧೆಯಲ್ಲಿ 7ನೇ ತರಗತಿ ʼಬಿʼ ವಿಬಾಗದ ವಿದ್ಯಾರ್ಥಿಗಳು ಪ್ರಥಮ ಮತ್ತು 8ನೇ ತರಗತಿ ʼಎʼ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರು. ಎಲ್ಲಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು.

ವಿಸ್ಮಯ ನ್ಯೂಸ್, ಕುಮಟಾ

Back to top button