ಬೆಂಗಳೂರು: KSRTC ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಚಿಲ್ಲರೆ ಸಮಸ್ಯೆ ಎಲ್ಲರಿಗೂ ಕಾಡುವ ಸಮಸ್ಯೆ. ಹಳ್ಳಿ ರೂಟಿನ ಬಸ್ಸುಗಳಲ್ಲಂತೂ ಈ ಸಮಸ್ಯೆ ಮೀತಿ ಮೀರಿದೆ ಎಂದೆ ಹೇಳಬಹುದು. ಈ ಕಾರಣಕ್ಕಾಗೇ ಜಗಳ ನಡೆದ ಘಟನೆಯೂ ವರದಿಯಾಗುತ್ತಲೇ ಇರುತ್ತದೆ. ಇಂತ ಅವಾಂತರಗಳನ್ನು ತಡೆಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಒಳ್ಳೆಯ ಪ್ಲಾನ್ ರೂಪಿಸಿದೆ.
ಹೌದು, ಬಸ್ಸಿನಲ್ಲಿ ಪ್ರಯಾಣಿಸುವ ಎಲ್ಲರಿಗೂ ಚಿಲ್ಲರೆ ಕೊಡಲು ಕಂಡಕ್ಟರ್‌ಗೆ ಸಾಧ್ಯವಾಗುವುದಿಲ್ಲ. ಇನ್ನು ಪ್ರಯಾಣಿಕರ ವಿಷಯಕ್ಕೆ ಬಂದರೆ ತುಂಬ ಪ್ರಯಾಣಿಕರ ಬಳಿ ಚಿಲ್ಲರೆ ಇರುವುದಿಲ್ಲ. ಇದು ಸಮಸ್ಯೆಗೆ ಮೂಲ ಕಾರಣವಾಗಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಯುಪಿಐ ಪೇಮೆಂಟ್ ( upi payment) ವ್ಯವಸ್ಥೆ ಜಾರಿಗೆ ತರಲು ನಿಗಮ ನಿರ್ಧರಿಸಿದೆ.
ಚಿಲ್ಲರೆ ಸಮಸ್ಯೆ ನಿವಾರಿಸುವ ದಿಸೆಯಲ್ಲಿ ಯುಪಿಐ ಪೇಮೆಂಟ್ ವ್ಯವಸ್ಥೆ ಜಾರಿಗೆ ತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ. ಹೀಗಾಗಿ ಇನ್ಮುಂದೆ ಪ್ರಯಾಣಿಸುವಾಗ ಸಾರ್ವಜನಿಕರು ಫೋನ್‌ಪೇ, ಗೂಗಲ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಬಹುದು. ಹೀಗೆ ಮಾಡುವುದರಿಂದ ಚಿಲ್ಲರೆ ಜಗಳ ತಪ್ಪಲಿದ್ದು, ಗ್ರಾಹಕರು ಹಾಗೂ ಸಾರಿಗೆ ಸಿಬ್ಬಂದಿಗೆ ಅನುಕೂಲವಾಗಲಿದೆ. ಆದರೆ, ಸದ್ಯಕ್ಕೆ ಕೆಲ ಆಯ್ದ ಬಸ್‌ಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಯುಪಿಐ ಪೇಮೆಂಟ್ (upi payment) ವ್ಯವಸ್ಥೆ ಜಾರಿಗೆ ಬಂದಿದೆ ಎನ್ನಲಾಗಿದೆ. ಪ್ರಯಾಣಿಕರ ಬ್ಯಾಂಕ್ ಖಾತೆಯಿಂದ ನೇರವಾಗಿ ಕೆಎಸ್‌ಆರ್‌ಟಿಸಿ ಬ್ಯಾಂಕ್ ಖಾತೆಗೆ ಹಣ ಪಾವತಿ ಆಗಲಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್