ಅಂಕೋಲಾ : ಬೆಳಂಬಾರ ಗ್ರಾ.ಪಂ ವ್ಯಾಪ್ತಿಯಲ್ಲಿ ಗುರುವಾರ 4 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಹಿಂದಿನ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಿಂದ ಬಂದಿರುವ ಸಾಧ್ಯತೆ ಇದೆ. ಈ ಮೂಲಕ ತಾಲೂಕಿನ ಈವರೆಗಿನ ಒಟ್ಟೂ ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆಯಾಗಿದ್ದು, ಇಂದು ಸೋಂಕಿನಿಂದ ಗುಣಮುಖರಾದ ಮೂವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು ಒಟ್ಟೂ 9 ಸಕ್ರೀಯ ಪ್ರಕರಣಗಳಿವೆ.
ಗುಣಮುಖರಾದವರು ಮೂವರು
ಸಕ್ರೀಯ ಪ್ರಕರಣ 9
ಅಚವೆ, ಪೂಜಗೇರಿ ಮತ್ತು ಪಟ್ಟಣ ವ್ಯಾಪ್ತಿ ಸೇರಿದಂತೆ ಒಟ್ಟೂ 167 ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.