Important
Trending

ಕ್ರೂಜರ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರನ ಕಾಲಿಗೆ ಗಂಭೀರ ಗಾಯ

ಸಿದ್ದಾಪುರ : ಕ್ರೂಜರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾದ ಘಟನೆ ತಾಲೂಕಿನ ತ್ಯಾಗಲಿ ಬಳಿ ಸಂಭವಿಸಿದೆ. ರಾಜ್ಯ ಹೆದ್ದಾರಿ 93ರ ಸಿರ್ಸಿ ಸಿದ್ದಾಪುರ ರಸ್ತೆಯಲ್ಲಿ ಶಿರಸಿ ಕಡೆಯಿಂದ ಸಿದ್ದಾಪುರ ಕಡೆಗೆ ಕ್ರೂಜರ್ ಚಾಲಕನು ತನ್ನ ವಾಹನವನ್ನು ಅತಿ ವೇಗ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಸಿದ್ದಾನೆ.

ಪರಿಣಾಮ ಬೈಕ್ ಸವಾರನ ಕಾಲಿಗೆ ತೀವ್ರ ಗಾಯವಾಗಿದೆ. ಸಿರ್ಸಿ ಕರೂರಿನ ದತ್ತಾತ್ರೇಯ ಗಣಪತಿ ಮಡಿವಾಳ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಕೃಷ್ಣ ಅರ್ಜುನ ಮುಗಳಿ ಎನ್ನುವರ ಮೇಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Back to top button