ಕುಮಟಾ: ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಡಿ.ಎಸ್.ಇ.ಆರ್.ಟಿ ಬೆಂಗಳೂರು ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕುಮಟಾ, ಉತ್ತರಕನ್ನಡ ಇವರ ಸಂಯುಕ್ತಾಶ್ರಯದಲ್ಲಿ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ನಡೆದ 2023-24ನೇ ಸಾಲಿನ ವಿಜ್ಞಾನ ವಸ್ತು ಪ್ರದರ್ಶನ ( science exihibition) ಸ್ಪರ್ಧೆ ಪ್ರೌಢಶಾಲಾ ಶಿಕ್ಷಕರ ವಿಭಾಗದಲ್ಲಿ ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನ ವಿಜ್ಞಾನ ಶಿಕ್ಷಕರಾದ ಶ್ರೀ ಮಹಾದೇವ ಬಿ ಗೌಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲೆಗೆ ಪ್ರಥಮಸ್ಥಾನ ಪಡೆದ ಶಾಲೆಯ ವಿಜ್ಞಾನ ಶಿಕ್ಷಕರಾದ ಮಹಾದೇವ ಬಿ ಗೌಡರವರಿಗೆ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀ ಹೊನ್ನಪ್ಪ ಎನ್ ನಾಯಕ, ಉಪಾಧ್ಯಕ್ಷ ಶ್ರೀಕಾಂತ ನಾಯಕ ಕಾರ್ಯದರ್ಶಿ ಶ್ರೀ ಮೋಹನ ಬಿ ಕೆರೆಮನೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಮುಖ್ಯಾಧ್ಯಾಪಕ ಶ್ರೀ ರೋಹಿದಾಸ ಎಸ್ ಗಾಂವಕರ ಹಾಗೂ ಶಿಕ್ಷಕವೃಂದ ಮತ್ತು ಹಿರೇಗುತ್ತಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶಾಂತಾ ಎನ್ ನಾಯಕ ಹಾಗೂ ಸದಸ್ಯರು, ಮಾದನಗೇರಿ ಮಹಾಲಸಾ ಸಿದ್ಧಿವಿನಾಯಕ ಟೆಂಪಲ್ ಟ್ರಸ್ಟ್ನ ಧರ್ಮದರ್ಶಿಗಳಾದ ಶ್ರೀ ಸುನೀಲ್ ಪೈ, ಬ್ರಹ್ಮ ಜಟಕ ಯುವಕ ಸಂಘ ಅಧ್ಯಕ್ಷರಾದ ಸಣ್ಣಪ್ಪ ಮಾರುತಿ ನಾಯಕ & ಸದಸ್ಯರು, ಊರಿನ ನಾಗರಿಕರು ಅಭಿನಂದಿಸಿ ಮುಂದಿನ ಹಂತಕ್ಕೆ ಶುಭ ಕೋರಿದ್ದಾರೆ.
ವಿಸ್ಮಯ ನ್ಯೂಸ್, ಕುಮಟಾ