ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ 185 ಕೋಟಿ ರೂ ಹಾನಿಯಾಗಿದ್ದು, ಆದರೆ ಇದುವರೆಗೆ ಸರಕಾರದಿಂದ ಹಣ ಬಂದಿಲ್ಲ. ಅನುದಾನದ ನಿರೀಕ್ಷೆಯಲ್ಲಿದ್ದೆವೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳಾದ ಗಂಗೂಬಾಯಿ ಮಾನಕರ್ ಅವರು ತಿಳಿಸಿದ್ದಾರೆ. ಬರ ಪೀಡಿತ ಘೋಷಣೆಯ ಪೂರ್ವದಲ್ಲಿ ಜಿಲ್ಲೆಯಲ್ಲಿ ಉಂಟಾದ ಅತಿವೃಷ್ಠಿಯಿಂದ ಒಟ್ಟೂ 185.91 ಕೋಟಿ ಯಷ್ಟು ಹಾನಿಯಾಗಿದೆ. ಈ ಬಗ್ಗೆ ಹಾನಿಯ ಪಟ್ಟಿ ಸರಕಾರಕ್ಕೆ ಸಲ್ಲಿಕೆಯಾಗಿದ್ದು, ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ 18 ರಷ್ಟು ಕಡಿಮೆ ಮಳೆಯಾಗಿದೆಯಾದರೂ ಜುಲೈನಲ್ಲಿ ಬಿದ್ದ ಮಳೆಯಿಂದ ರಸ್ತೆ, ಶಾಲೆ ಹಾಗೂ ಅಂಗನವಾಡಿದಗಳು ಹಾನಿಗೊಳಗಾಗಿದ್ದು, ಸುಮಾರು 416 ಕಾಮಗಾರಿಗಳನ್ನು ರೂಪಾಯಿ 7.67 ಕೋಟಿ ರೂ ವೆಚ್ಚದಲ್ಲಿ ಕೈಗೊಳ್ಳಲು ಹಣ ಬಿಡುಗಡೆ ಮಾಡಲಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ತಂಡದೊAದಿಗೆ ಶೇ. 33 ಕ್ಕಿಂತ ಹೆಚ್ಚು ಹಾನಿಯಾಗಿರುವ ಪ್ರದೇಶಗಳನ್ನು ಬೆಳೆ ಹಾನಿ ಸಮೀಕ್ಷೆ ಕೈಗೊಂಡು ಸರ್ಕಾರಕ್ಕೆ ಪರಿಹಾರಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಬ್ಯರೋ ರಿಪೋರ್ಟ್, ವಿಸ್ಮಯ ನ್ಯೂಸ್.