ಕಾರವಾರ: ಮಳೆ ಇಲ್ಲದೆ ಕಂಗಾಲಾಗಿದ್ದ ಅನ್ನದಾತರ ಮೊಗದಲ್ಲಿ ಮಂದಹಾಸ ಮತ್ತೆ ಮರಳಿದೆ. ಮುಂಗಾರು ಮಳೆ ಮತ್ತೆ ಅಬ್ಬರಿಸುತ್ತಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಬಿರುಸು ಪಡೆದುಕೊಂಡಿದೆ. ಮುಂದಿನ ಎರಡು ವಾರಗಳ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Rain Alert) ಮಾಹಿತಿ ನೀಡಿದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 12 ರ ವರೆಗೆ ಉತ್ತರಕನ್ನಡ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ಸುಮಾರು 175 ಮಿ.ಮೀ ನಿಂದ 250 ಮಿ.ಮೀ ವರೆಗೆ ಮಳೆಯಾಗಿದೆ ಎಂದು ತಿಳಿಸಿದೆ. ಅಲ್ಲದೆ, 12 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಸೆಪ್ಟೆಂಬರ್ 28 ಮತ್ತು 29 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Rain Alert) ನೀಡಿದ್ದು, ಹೀಗಾಗಿ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅತಿಯಾದ ಮಳೆ ಕೊರತೆ ಮತ್ತು ಬರಗಾಲದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಮತ್ತೆ ಮಳೆಯ ವಾತಾವರಣ ಕಂಡುOದಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,