ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಒಟ್ಟು 310 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ( KFD Recruitment) ಅಧಿಸೂಚನೆ ಹೊರಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 18,600 ರಿಂದ ರಿಂದ 32,600 ರೂಪಾಯಿ ಮಾಸಿಕ ವೇತನ ನಿಗದಿಯಾಗಿದೆ. ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿoದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Bank Recruitment 2023: ಉದ್ಯೋಗಾವಕಾಶ: 600 ಹುದ್ದೆಗಳಿಗೆ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ; Apply Now
ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಒಟ್ಟು 310 ಅರಣ್ಯ ವೀಕ್ಷಕ ಹುದ್ದೆಗಳಲ್ಲಿ ಬೆಂಗಳೂರು 33, ಕೆನರಾ 32, ಕೊಡಗು 16, ಬೆಳಗಾವಿ 20, ಬಳ್ಳಾರಿ 20, ಕಲಬುರ್ಗಿ 23, ಚಾಮರಾಜನಗರ 32, ಮಂಗಳೂರು 20, ಮೈಸೂರು 32, ಶಿವಮೊಗ್ಗ 30, ಧಾರವಾಡ 7, ಚಿಕ್ಕಮಗಳೂರು 32, ಹಾಸನದಲ್ಲಿ 20 ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಕೆಳಗಡೆ ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸುವ ಲಿಂಕ್ ನೀಡಲಾಗಿದ್ದು, ಇವುಗಳನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಯು ಅರ್ಜಿಯನ್ನು ಭರ್ತಿ ಮಾಡುವಾಗ ಅಸ್ಪಷ್ಟ-ಅಪೂರ್ಣ-ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದ್ದಲ್ಲಿ ಅಭ್ಯರ್ಥಿಗಳೇ ಅದಕ್ಕೆ ನೇರ & ಸಂಪೂರ್ಣ ಜವಾಬ್ದಾರರಾಗುತ್ತಾರೆ. ( KFD Recruitment) ಅಭ್ಯರ್ಥಿಗಳು Online ಅರ್ಜಿಯಲ್ಲಿ ನೀಡಿರುವ ಮಾಹಿತಿ-ವಿವರಗಳನ್ನು ಯಾವುದೇ ಹಂತದಲ್ಲಿಯೂ ಬದಲಾವಣೆ ಮಾಡಲು ಅವಕಾಶ ನೀಡಲಾಗುವುದಿಲ್ಲ. ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡುವಾಗ ಈ ಅಧಿಸೂಚನೆಯಲ್ಲಿ ತಿಳಿಸಿರುವ ಎಲ್ಲಾ ಅಂಶಗಳನ್ನು ಸರಿಯಾಗಿ ಓದಿ, ಅರ್ಥೈಸಿಕೊಂಡು, ಅರ್ಜಿಯನ್ನು ಸಮರ್ಪಕವಾಗಿ ಭರ್ತಿ ಮಾಡತಕ್ಕದ್ದು ಎಂದು ಸೂಚನೆಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ..
ಒಟ್ಟು ಹುದ್ದೆಗಳು | 310 |
ಇಲಾಖೆ | ರಾಜ್ಯ ಅರಣ್ಯ ಇಲಾಖೆ : KFD |
ಹುದ್ದೆಯ ಹೆಸರು | ಅರಣ್ಯ ವೀಕ್ಷಕ |
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ | ಅಕ್ಟೋಬರ್ 26, 2023 |
ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ನೇರನೇಮಕಾತಿ, ಸಂದರ್ಶನ, ಸರ್ಕಾರಿ – ಖಾಸಗಿ ಸೇರಿ ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ,
ಸಂದೇಶ್ ಎನ್, ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್