Important
Trending

ಅತಿ ವೇಗದ ಚಾಲನೆ ತಂದ ಅವಾಂತರ: ಬೈಕ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಲಾರಿ

ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯ

ಕುಮಟಾ: ಅತಿ ವೇಗವಾಗಿ ಚಲಾಯಿಸಿಕೊಂಡ ಬಂದ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಮಾನೀರ ಸಮೀಪ ನಡೆದಿದೆ. ಅಪಘಾತದಲ್ಲಿ ಹರಕಡೆ ಮೂಲದ ಬೈಕ್ ಸವಾರ ಶಿವು ಗೌಡ ಎಂಬುವವರಿಗೆ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಪಲ್ಟಿಯಾಗಿ ಹೆದ್ದಾರಿ ಸಮೀಪದಲ್ಲೇ ಇದ್ದ ಹಳ್ಳಕ್ಕೆ ಬಿದ್ದಿದ್ದು, ಲಾರಿ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಲಾರಿಯಲ್ಲಿದ್ದ ಚಂದು,ಗಣೇಶ ಎಂಬುವವರಿಗೆ ಗಾಯವಾಗಿದೆ. ಕ್ಲಿನರ್ ಗಂಭೀರವಾಗಿ ಗಾಯಗೊಂಡಿದ್ದು ಕುಮಟ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಲಾರಿ ಚಾಲಕನ ಅತಿವೇಗ ಮತ್ತು ಅಜಾಗರುಕತೆಯ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೈಕ್ ಸವಾರನಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿಸ್ಮಯ ನ್ಯೂಸ್, ನಾಗೇಶ್ ದಿವಗಿ, ಕುಮಟಾ

Back to top button