Follow Us On

Google News
Important
Trending

National Flag: ರಾಷ್ಟ್ರಧ್ವಜಕ್ಕೆ ಅಪಮಾನ: ವ್ಯಕ್ತಿಯ ಬಂಧನ

ಶಿರಸಿ: ಭಾರತದ ರಾಷ್ಟ್ರಧ್ವಜಕ್ಕೆ ಮಸ್ಲಿಂ ಧರ್ಮದ ಮದೀನಾ ಗುಂಬಸ್ ಅಂಟಿಸಿ ಮನೆಯ ಮೇಲೆ ಹಾರಿಸಿ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಖಾದರ ಶೇಖ್, ಬಂಧಿತ ವ್ಯಕ್ತಿ. ಈತ ಮನೆಯ ಮೇಲೆ ರಾಷ್ಟ್ರ ಧ್ವಜವನ್ನ ಹಾರಿಸಿದ್ದಾನೆ. ಹಾರಿಸಿರುವ ರಾಷ್ಟ್ರ ಧ್ವಜಕ್ಕೆ ಮುಸ್ಲಿಂ ಧರ್ಮದ ಮದೀನಾ ಗುಂಬಸ್ ಚಿತ್ರವನ್ನ ಅಂಟಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದ ಎಂಬ ಆರೋಪ ಕೇಳಿಬಂದಿತ್ತು. ಈ ಪೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಶಿರಸಿ ಪೊಲೀಸರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಆರೋಪದ ಮೇಲೆ ಉಮರ್ ಫಾರೂಕ್ ಅಬ್ದುಲ್ ಖಾದರ ಶೇಖ್ ನನ್ನು ಬಂಧಿಸಿದ್ದಾರೆ.

ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈದ್ ಮಿಲಾದ್ ವೇಳೆ ಮನೆಯ ಮೇಲೆ ಹಾರಿಸಿದ ತ್ರಿವರ್ಣಧ್ವಜದಲ್ಲಿ ಅಶೋಕ ಚಕ್ರ ಇರುವ ಜಾಗದಲ್ಲಿ ಮದೀನಾ ಗುಂಬಜ್ ಚಿತ್ರ ಹಾಕಿದ್ದು, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ ಕೇಳಿಬಂದಿತ್ತು. ಬೀಟ್ ಪೊಲೀಸರು ಇದನ್ನು ಮೇಲಾಧಿಕಾರಿಗಳಿಗೆ ತಿಳಿಸಿದ್ದರು ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button