Follow Us On

WhatsApp Group
Important
Trending

ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾದ ಅಂಚೆ ಸಹಾಯಕ

ಹಳಿಯಾಳ: ಅಂಚೆ ಸಹಾಯಕನೋರ್ವ ಬಾಡಿಗೆ ಮನೆಯೊಂದರಲ್ಲಿ ನೇಣಿಗೆ ಶರಣಾದ ಘಟನೆ ಪಟ್ಟಣದ ಬಸವರಾಜ ಚಲನಚಿತ್ರ ಮಂದಿರದ ಹತ್ತಿರ ನಡೆದಿದೆ. ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಲ್ಲಿನ ಅಂಚೆ ಕಚೇರಿಯಲ್ಲಿ ಅಂಚೆ ಸಹಾಯಕನಾಗಿ ಕೆಲಸವನ್ನು ನಿರ್ವಹಿಸುತ್ತಿದ್ದ , 30 ವರ್ಷ ವಯಸ್ಸಿನ ಮಹಾಂತೇಶ್ ಮಹಾದೇವ ತಳವಾರ ಸಾವಿಗೆ ಶರಣಾದ ವ್ಯಕ್ತಿ.

ಅವಿವಾಹಿತನಾಗಿದ್ದು, ಬಸವರಾಜ ಚಲನಚಿತ್ರ ಮಂದಿರದ ಹತ್ತಿರವಿರುವ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ. ಈ ಮೊದಲು ದಾಂಡೇಲಿಯ ಅಂಚೆ ಇಲಾಖೆಯಲ್ಲಿ ಅಂಚೆಯಣ್ಣನಾಗಿ ಸೇವೆಯನ್ನು ಸಲ್ಲಿಸುತ್ತಿದ್ದ. ಕಳೆದ ಒಂದೆರಡು ವರ್ಷಗಳ ಹಿಂದೆ ಹಳಿಯಾಳ ಅಂಚೆ ಕಚೇರಿಗೆ ವರ್ಗಾವಣೆಗೊಂಡು ಅಂಚೆ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Back to top button