Important
Trending

ಬೈಕ್‌ಗೆ ಡಿಕ್ಕಿಹೊಡೆದ ಕಾರು: ಬಿಜೆಪಿ ಗ್ರಾಮೀಣ ಘಟಕದ ಕಾರ್ಯದರ್ಶಿ ಸ್ಥಳದಲ್ಲೇ ಸಾವು

ಕಾರವಾರ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟರುವ ಘಟನೆ ತಾಲೂಕಿನ ಸದಾಶಿವಘಡದಲ್ಲಿ ನಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ದೂರದಲ್ಲಿ ಸಿಡಿದು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಬೈಕ್ ಸವಾರ ತುಕಾರಾಮ್ ಚೆಂಡೇಕರ್ ಎಂದು ತಿಳಿದುಬಂದಿದ್ದು, ಈತ ಬಿಜೆಪಿ ಗ್ರಾಮೀಣ ಘಟಕದ ಕಾರ್ಯದರ್ಶಿಯಾಗಿದ್ದ. ಬೈಕ್ ಮತ್ತು ಕಾರು ಎರಡು ಕೂಡ ಗೋವಾ ಕಡೆಯಿಂದ ಕಾರವಾರ ಕಡೆಗೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ವೇಳೆ ತುಕಾರಾಮ್ ಚೆಂಡೇಕರ್ ನಿಧನಕ್ಕೆ ಕಾರವಾರ – ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ನಾಯ್ಕ, ಸಂತಾಪ ಸೂಚಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Back to top button