ಭಟ್ಕಳ: ತಾಲೂಕಿನ ತಲಾಂದ ಗ್ರಾಮದಲ್ಲಿ ಯುವಕನೊರ್ವ ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಮ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತ ತಲಾಂದ ನಿವಾಸಿ ಮಂಜುನಾಥ ಸೋಮಯ್ಯ ಗೊಂಡ ಎಂದು ತಿಳಿದು ಬಂದಿದೆ.
ಈತ ಅಕ್ಟೋಬರ್ 5 ರಂದು ರಾತ್ರಿ ಯಾವುದೊ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯ ಅಂಗಳದಲ್ಲಿ ಸಾರಾಯಿ ಕುಡಿದು ತನ್ನ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಾಕಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾನೆ. ಬಳಿಕ ಅಲ್ಲಿನ ಸ್ಥಳೀಯರು ತಕ್ಷಣ ಬೆಂಕಿ ನಂದಿಸಿ, ಭಟ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸಿ, ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಎಂದು ಸಾವನ್ನಪ್ಪಿದ್ದಾನೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ