ಭಟ್ಕಳ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ತನ್ನ ಪತ್ನಿಯನ್ನೆ ಕತ್ತು ಸೀಳಿ ಬ-ರ್ಬರವಾಗಿ ಹತ್ಯೆಗೈದ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರದ ತೇರ್ನಾಮಕ್ಕಿ ಸಬ್ಬತ್ತಿ ಕ್ರಾಸ್ ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಬರ್ಬರವಾಗಿ ಹತ್ಯೆಯಾದ ಮಹಿಳೆಯನ್ನು ನಂದಿನಿ ಲೋಕೇಶ ನಾಯ್ಕ (30) ಎಂದು ತಿಳಿದು ಬಂದಿದೆ. ಹತ್ಯೆಗೆ ಮೂಲಕ ಕಾರಣ ಕೌಟುಂಬಿಕ ಕಲಹ ಎಂದು ತಿಳಿದು ಬಂದಿದೆ.
ಮೃತಳಿಗೆ ಓರ್ವ ಪುತ್ರ ಹಾಗೂ ಪುತ್ರಿ ಇದ್ದರು. ಪತಿಯು ಶಿಲ್ಪಿ ಕೆಲಸ ಮಾಡಿಕೊಂಡಿದ್ದನು. ಈತ ಮುರ್ಡೇಶ್ವರದ ನಾಡವರ ಕೇರಿ ನಿವಾಸಿಯಾಗಿದ್ದು ಕಳೆದ 3 ದಿನದ ಹಿಂದಷ್ಟೇ ಸಬ್ಬತ್ತಿ ಕ್ರಾಸನಲ್ಲಿರುವ ಮನೆಯೊಂದರಲ್ಲೊ ತನ್ನ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸಿಸುತ್ತಿದ್ದನು. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿ ಹಾಗೂ ಪತ್ನಿಯ ನಡುವೆ ಗಲಾಟೆ ನಡೆದಿದ್ದು ಬಳಿಕ ಕೋಪಗೊಂಡ ಪತಿ, ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದ.
ಇದನ್ನು ಪಕ್ಕದ ಮನೆಯವರು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸ್ ಸಿಪಿಐ ವಸಂತ ಕಾಯ್ಕಿಣಿ ಮತ್ತು ಅವರ ತಂಡ ಬಲೆ ಬೀಸಿ ಆರೋಪಿ ಲೋಕೇಶ ನಾಯ್ಕನನ್ನು ಖಾಸಗಿ ಹೊಟೇಲವೊಂದ ರಲ್ಲಿ ವಶಕ್ಕೆ ಪಡೆದಿದ್ದಾರೆ. ಪಿಎಸ್ ಐ ಮಂಜುನಾಥ, ಇತರ ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಚರಣೆ ನಡೆದಿದೆ.
ಸುದ್ದಿ ತಿಳಿಯುತ್ತಿರುಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾವಣೆಗೊಂಡಿದ್ದಾರೆ. ಅಮ್ಮನನ್ನು ಕಳೆದುಕೊಂಡ ಮಕ್ಕಳ, ಹಾಗೂ ಕುಟುಂಬದವರ ರೋದನೆ ಮುಗಿಲು ಮುಟ್ಟಿತ್ತು. ಎಸ್ ಪಿ ವಿಷ್ಣುವರ್ಧನ್, ಡಿವೈ ಎಸ್ ಪಿ ಶ್ರೀಕಾಂತ ಕೆ ಸ್ಥಳಕ್ಕೆ ಬೇಟಿ ನೀಡಿ ಮುಂದಿನ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉದಯ್ ಎಸ್ ನಾಯ್ಕ, ವಿಸ್ಮಯ ನ್ಯೂಸ್, ಭಟ್ಕಳ