Important
Trending

ಅಡ್ಡ ಬಂದ ದನ ತಪ್ಪಿಸಲು ಹೋಗಿ ಪ್ರಾಣ ಕಳೆದುಕೊಂಡ ಬೈಕ್ ಸವಾರ

WhatsApp Group Join Now

ಹೊನ್ನಾವರ: ರಸ್ತೆಯ ಮಧ್ಯೆ ಬಂದ ಆಕಳನ್ನು ತಪ್ಪಿಸಲು ಹೋಗಿ ಬೈಕ್ ಸವಾರ ಬಿದ್ದು, ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ತಾಲೂಕಿನ ಕರ್ಕಿ ತೊಪ್ಪಲಕೇರಿ ಸಮೀಪ ಸಂಭವಿಸಿದೆ. ಅಪಘಾತದ ತೀವ್ರತೆಗೆ ತಲೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಕೂಡಲೇ ತಾಲೂಕ ಆಸ್ಪತ್ರೆಗೆ ದಾಖಲಿಸಿ ನೆರೆ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತಪಟ್ಟವರು ಕರ್ಕಿ ತೊಪ್ಪಲಕೇರಿಯ ರಾಘವೇಂದ್ರ ಗಣೇಶ ಮೇಸ್ತ ಎಂದು ತಿಳಿದುಬಂದಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಾಲನೆಯೇ ಘಟನೆ ಕಾರಣ ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button