ಶಿರಸಿ: KSRTC ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರಸಿ ಹುಬ್ಬಳ್ಳಿ ರಸ್ತೆಯ ಇಸಳೂರಿನ ಸಮೀಪ ಸಂಭವಿಸಿದೆ. ಎರಡೂ ಬಸ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗ್ಗೆ 7 ಗಂಟೆ ಸರಿಸುಮಾರು ಈ ಅಪಘಾತ ಸಂಭವಿಸಿದೆ.
ದುರ್ಘಟನೆಯಲ್ಲಿ ಬಸ್ ಒಳಗೆ ಚಾಲಕ ಸಿಲುಕಿದ್ದು, ಆತನನ್ನು ಹೊರತೆಗೆಯಲು ಸಾರ್ವಜನಿಕರು ಹರಸಾಹಸಪಟ್ಟರು. ಶಿರಸಿಯಿಂದ ಅಕ್ಕಿಹಾಲೂರಿಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಖಾಸಗಿ ಬಸ್ ಡಿಕ್ಕಿಯಾಗಿದೆ. ತುರ್ತಾಗಿ 108 ವಾಹನ ಹಾಗು ಹೈವೆ ಪೆಟ್ರೋಲ್ ವಾಹನದ ಮೂಲಕ ಗಾಯಾಳುಗಳಿಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ವಿಸ್ಮಯ ನ್ಯೂಸ್, ಶಿರಸಿ