Important
Trending

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಹಸಿರು ನಿಶಾನೆ

ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ
ಆದರೆ ಈ ಷರತ್ತುಗಳು ಅನ್ವಯ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೆ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಹೊಸ ನಿಯಮದ ಪ್ರಕಾರ ಸಂಘ- ಸಂಸ್ಥೆಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದೆ. ಆದರೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವವರು ಮೂರ್ತಿ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಪ್ರತಿಷ್ಠಾಪನೆ ಮಾಡುವವರು ಎರಡು ಅಡಿ ಮೀರದಂತೆ ಪ್ರತಿಷ್ಠಾಪನೆ ಮಾಡಬೇಕು ಎಂದು ಉಲ್ಲೇಖಿಸಲಾಗಿದೆ.

ಆದರೆ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹೀಗೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಅವಕಾಶವಿರುವುದಿಲ್ಲ. ಪಾರಂಪರಿಕವಾಗಿ ಗಣೇಶೋತ್ಸವ ಮಾಡುವಲ್ಲಿ ಗಣೇಶೋತ್ಸವ ಸಮಿತಿ ಅಥವಾ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವುದಕ್ಕೆ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು.

ಪರಿಷ್ಕೃತ ಮಾರ್ಗಸೂಚಿ

ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದ ಒಳಗೆ, ತಮ್ಮ ಮನೆಗಳಲ್ಲಿ , ಖಾಸಗಿ, ಸರ್ಕಾರಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊAದಿಗೆ ಆಚರಿಸಬಹುದು. ಗಣೇಶ ಮೂರ್ತಿಯ ಮೆರವಣಿಗೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ

ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 7848833568

Back to top button