ಭಟ್ಕಳ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೇಶ್ವರ ನಗರದ ಹರಿಜನಕೇರಿಯಲ್ಲಿ ನಡೆದಿದೆ. ಮೃತ ವ್ಯಕ್ತಿ, ರಮೇಶ ಮುತ್ತುಗೋಪಾಲ ಹರಿಜನ (45)ಎಂದು ತಿಳಿದು ಬಂದಿದೆ. ಈತ ಪುರಸಭೆಯಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ಒಂದು ವಾರದ ಹಿಂದೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯವರೊಂದಿಗೆ ಸರಿಯಾಗಿ ಮಾತನಾಡದೇ ತನ್ನಷ್ಟಕ್ಕೆ ತಾನೇ ಇದ್ದ ಎನ್ನಲಾಗಿದೆ.. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಪಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ