Important
Trending

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಗ್ಯಾಸ್ ಟ್ಯಾಂಕರ್: ಕೆಲಕಾಲ ಆತಂಕ

ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಒಂದು ಡಿವೈಡರ್‌ಗೆ ಡಿಕ್ಕಿ ಹೊಡೆದು, ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ಕುಮಟಾ ತಾಲೂಕಿನ ಹಂದಿಗೋಣ ರಾಷ್ಟ್ರೀಯ ಹೆದ್ದಾರಿ (66) ರಲ್ಲಿ ಸೋಮವಾರ ರಾತ್ರಿ ನಡೆದಿದೆ. ಕುಮಟಾ ಮಾರ್ಗವಾಗಿ ಮಂಗಳೂರು ಕಡೆ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಷಾತ್ ಗ್ಯಾಸ್ ಟಾಂಕರ್ ಖಾಲಿ ಇದ್ದುದ್ದರಿಂದ ಯಾವುದೇ ದುರ್ಘಟನೆ ನಡೆದಿಲ್ಲ.

ವಾಹನ ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆ ಚಲಿಸುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಸ್ಥಳಕ್ಕೆ ಕುಮಟಾ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ, ತಡರಾತ್ರಿಯೇ ಗ್ಯಾಸ್ ಟ್ಯಾಂಕರ್ ತೆರವುಗೊಳಿಸಿದ್ದಾರೆ. ಬಳಿಕ ವಾಹನ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. ಈ ಕುರಿತಾಗಿ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ, ಕುಮಟಾ

Back to top button