ಕರೊನಾ ನಿಯಂತ್ರಣದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಮಾದರಿ

ಸೋಂಕು ವ್ಯಾಪಿಸುವಿಕೆಯಲ್ಲಿ ನಿಯಂತ್ರಣ

ಕಾರವಾರ: ಕರೊನಾ ಮಹಾಮಾರಿ ಇಡೀ ವಿಶ್ವವನ್ನೇ ಕಂಗೆಡಿಸಿದೆ. ನಮ್ಮ ಜಿಲ್ಲೆಯಲ್ಲಿ ಕೂಡಾ ಕರೊನಾ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದು, ಜಿಲ್ಲೆಯ ಎಲ್ಲ ಸಾರ್ವಜನಿಕರು ಲಾಕ್ ಡೌನ್ ನಿಯಮಗಳನ್ನು ಹಾಗೂ ಅನ್ ಲಾಕ್ ನಿಯಮಗಳನ್ನು ತಪ್ಪದೇ ಪಾಲಿಸಿದ್ದರಿಂದ ಜಿಲ್ಲೆಯಲ್ಲಿ ಸೋಂಕು ವ್ಯಾಪಿಸುವಿಕೆಯಲ್ಲಿ ಬಹುತೇಕ ನಿಯಂತ್ರಣ ಸಾಧಿಸುವಲ್ಲಿ ಯಶಸ್ಸು ಕಾಣುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ್ಕುಮಾರ್ ಮಾಹಿತಿ ನೀಡಿದ್ದಾರೆ. ಜಿಲ್ಲಾಡಳಿತ ಪ್ರಮುಖವಾಗಿ ಕೊವಿಡ್-19 ಸಮುದಾಯಕ್ಕೆ ಹರಡದಂತೆ ಹಾಗೂ ಸೋಂಕಿತರ ಮರಣ ಸಂಭವಿಸದoತೆ ಚಿಕಿತ್ಸೆ ನೀಡುವ ಬಗ್ಗೆ ಹೆಚ್ಚಿನ ಗಮನವನ್ನು ನೀಡಿದ್ದು, ನಿರಂತರವಾಗಿ ಸೋಂಕು ಪತ್ತೆ ಪರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸುತ್ತಿದ್ದು, ರಾಜ್ಯದಲ್ಲೇ ಅತ್ಯಂತ ಕಡಿಮೆ ಶೇಕಡಾ 5 ರಿಂದ 6% ರಷ್ಟು ಸೋಂಕು ಪತ್ತೆಯಾಗುತ್ತಿದೆ.

ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 46406 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕೇವಲ 3368 ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ 2420 ಜನರು ಸಂಪೂರ್ಣ ಗುಣಮುಖರಾಗಿದ್ದು, ಕೇವಲ 33 ಸಾವಿನ ಪ್ರಕರಣ ಇದೆ. ರಾಜ್ಯದಲ್ಲಿ ಇತರೇ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯು ಕೊವಿಡ್-19 ಸೋಂಕನ್ನು ಸಮರ್ಥವಾಗಿ ನಿಭಾಯಿಸಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೋವಿಡ್ ಸ್ಥಿತಿಗತಿಯ ಬಗ್ಗೆ ಮಾಧ್ಯಮದವರೊಂದಿಗೆ ಮಾಹಿತಿ ನೀಡಿ ಅವರು ಮಾತನಾಡಿದರು.

ಜಿಲ್ಲಾಡಳಿತವು ಪ್ರಮುಖವಾಗಿ ಸಮುದಾಯಕ್ಕೆ ಸೋಂಕು ಹರಡದಂತೆ ನೋಡಿಕೊಳ್ಳಬೇಕಿದೆ. ಈಗಾಗಲೇ ಸೋಂಕಿತರಿಗೆ ಬೇಕಾದ ಅಗತ್ಯ ಚಿಕಿತ್ಸೆ ನೀಡುವಲ್ಲಿ ಎಲ್ಲಾ ರೀತಿಯ ಕ್ರಮಕೈಗೊಂಡಿದ್ದೇವೆ.
ಕರೊನಾ ನಿಯಂತ್ರಣದ ಯಶಸ್ಸಿಗೆ ಜಿಲ್ಲೆಯ ಜನರು, ಜನ ಪ್ರತಿನಿಧಿಗಳು, ಕರೋನಾ ವಾರಿಯರ್ಸ ಗಳಾಗಿ ಕಾರ್ಯ ನಿರ್ವಹಿಸಿದ ವೈದ್ಯರು, ದಾದಿಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಸೇರಿದಂತೆ ಎಲ್ಲರೂ ಕೈಜೋಡಿಸಿದ್ದಾರೆ. ಜಿಲ್ಲಾಡಳಿತದೊಂದಿಗೆ ಕೈಜೊಡಿಸಿ ಕೆಲಸ ನಿರ್ವಹಿಸಿದ ಎಲ್ಲರಿಗೂ ಧನ್ಯವಾದಗಳು.
ಡಾ.ಹರೀಶ್ ಕುಮಾರ್, ಜಿಲ್ಲಾಧಿಕಾರಿಗಳು

ಈ ಯಶಸ್ಸಿನಿಂದ ಜಿಲ್ಲೆಯಲ್ಲಿ ಕರೊನಾ ನಿಯಂತ್ರಣದಲ್ಲಿದೆಯೆoದು ನಾವು ಈ ಹಂತದಲ್ಲಿ ಮೈಮರೆಯುವ ಹಾಗಿಲ್ಲ. ಕರೊನಾ ಶೀಘ್ರವಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವದರಿಂದ ಇದರ ನಿಯಂತ್ರಣ ಸಾರ್ವಜನಿಕರ ಸಹಕಾರವಿಲ್ಲದೇ ಸಾಧ್ಯವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಗಣೇಶ ಚತುರ್ಥಿ ಹಾಗೂ ಇತರೇ ಸಾಲು ಸಾಲು ಹಬ್ಬಗಳು ಇರುತ್ತಿದ್ದು, ಜಿಲ್ಲೆಯ ನಾಗರೀಕರು ಈ ಹಿಂದಿನoತೆಯೇ ಸಾಮಾಜಿಕ ಅಂತರ, ವೈಯುಕ್ತಿಕ ಸ್ವಚ್ಚತೆ ಹಾಗೂ ಉತ್ತಮ ಆರೋಗ್ಯವನ್ನು ಕಾಯ್ದುಕೊಂಡು, ಮಾರ್ಗಸೂಚಿಯ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚಿಸಿದರು.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ

ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ
ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 7848833568

Exit mobile version