ನವೆಂಬರ್ 21 ರಂದು ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಅಂಕೋಲಾ ತಾಲೂಕಾ ಕ್ರೀಡಾಂಗಣದಲ್ಲಿ ಆಯೋಜನೆ.

ಅಂಕೋಲಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಶಾಲಾ ಶಿಕ್ಷಣ ಇಲಾಖೆ ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ತಾಲೂಕಿನ ಬಸ್ ಡಿಪೋ ಬಳಿ ಇರುವ (ವಂದಿಗೆ ವ್ಯಾಪ್ತಿಯ ) ತಾಲೂಕು ಕ್ರೀಡಾಂಗಣದಲ್ಲಿ ನವೆಂಬರ್ 21ರಂದು ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದು ಕಾರವಾರ ಅಂಕೋಲಾ ಶಾಸಕ ಸತೀಶ ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಅನಂತಕುಮಾರ ಹೆಗಡೆ, ಶಾಸಕರುಗಳಾದ ಆರ್. ವಿ.ದೇಶಪಾಂಡೆ, ಭೀಮಣ್ಣ ನಾಯ್ಕ, ದಿನಕರ ಶೆಟ್ಟಿ, ಶಿವರಾಮ ಹೆಬ್ಬಾರ, ಎಸ್. ವಿ.ಸಂಕನೂರು, ಶಾಂತಾರಾಮ ಸಿದ್ಧಿ, ಗಣಪತಿ ಉಳ್ವೇಕರ, ಪುರಸಭೆ ಸದಸ್ಯೆ ಹೇಮಾ ಆಗೇರ, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಸದಸ್ಯರು, ಗ್ರಾಮ ಪಂಚಾಯತ್ ಜನ ಪ್ರತಿನಿಧಿಗಳು, ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

ಕ್ರೀಡಾ ಕೂಟದಲ್ಲಿ ಸುಮಾರು 200 ಜನ ವಿಶೇಷ ಚೇತನ ವಿದ್ಯಾರ್ಥಿಗಳು ಭಾಗವಹಿಸಲಿದ್ದು , ಊಟೋಪಚಾರ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅಂಕೋಲಾ ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ್ ಮತ್ತು ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ನಾಯಕ ತಿಳಿಸಿದ್ದು, ಕ್ರೀಡಾಕೂಟದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿ, ಸರ್ವರಿಗೂ ಸ್ವಾಗತ ಕೋರಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ವಿ ನಾಯಕ ಅಂಕೋಲಾ

Exit mobile version