Important
Trending

ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ: ಐವರಿಗೆ ಗಾಯ

ಸಿದ್ದಾಪುರ: ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಐವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಜೋಗಿನಮಠದ ಬಳಿಯ ತಿರುವಿನಲ್ಲಿ ನಡೆದಿದೆ. ಹೊನ್ನಾವರ ಬೆಂಗಳೂರು ಹೆದ್ದಾರಿಯಲ್ಲಿ ಸಾಗರ ಕಡೆಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ಲಾರಿ ರಸ್ತೆಯ ಎಡ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷತನ ಘಟನೆ ಸಂಭವಿಸಲು ಕಾರಣ ಎಂದು ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗೆ ಸಾಗರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Back to top button