Follow Us On

WhatsApp Group
Job News
Trending

KFD Recruitment: 540 ಹುದ್ದೆಗಳ ನೇಮಕಾತಿ: ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದು

ಡಿಸೆಂಬರ್ 30, 2023 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ( KFD Recruitment) 540 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 12ನೇ ತರಗತಿ ಅಥವಾ ಪಿಯುಸಿ ಪೂರ್ಣಗೊಳಿಸಿದ ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರಣ್ಯ ರಕ್ಷಕ (ಫಾರೆಸ್ಟ್ ಗಾರ್ಡ್) ಹುದ್ದೆಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

( KFD Recruitment) ನೇಮಕಾತಿ ಅಧಿಸೂಚನೆಯ ಪ್ರಕಾರ, ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 2ಎ , 2ಬಿ , 3ಎ , 3ಬಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 2 ವರ್ಷಗಳು ಮತ್ತು ಎಸ್ಸಿ-ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ಇಲಾಖೆಅರಣ್ಯ ಇಲಾಖೆ
ಒಟ್ಟು ಹುದ್ದೆಗಳು540
ಅಧಿಸೂಚನೆಯ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಡಿಸೆಂಬರ್ 30, 2023

ಲಿಖಿತ ಪರೀಕ್ಷೆ , ಸಂದರ್ಶನ, ವೈದ್ಯಕೀಯ ಫಿಟ್ನೆಸ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 30, 2023 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಧಿಕೃತ ವೆಬ್‌ಸೈಟ್ ಮತ್ತು ಅಧಿಸೂಚನೆಯ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ. ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಂದೀಪ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button