Important
Trending

ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ: ಅಕ್ರಮವಾಗಿ ಗೋವಾ ಸಾರಾಯಿ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜೋಯಿಡಾ: ತಾಲೂಕಿನ ಅನಮೋಡ ಅಬಕಾರಿ ಚೆಕ್ ಪೋಸ್ಟ್ ಬಳಿ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಗೋವಾ ಸಾರಾಯಿಯನ್ನು ಸಾಗಿಸುತ್ತಿದ್ದ ವ್ಯಕ್ತಿಯೊರ್ವನ್ನು ಬಂಧಿಸಿ, ಸಾರಾಯಿ ಮತ್ತು ವಾಹನವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಅನಮೋಡ ಅಬಕಾರಿ ತನಿಖಾ ಠಾಣೆಯಲ್ಲಿ ವಾಹನಗಳ ತಪಾಸಣೆಯ ಸಂದರ್ಭದಲ್ಲಿ ಈ ಅಕ್ರಮ ಸಾರಾಯಿ ಮಾರಾಟ ಜಾಲ ಬೆಳಕಿಗೆ ಬಂದಿದೆ. ಸುಮಾರು 5 ಲಕ್ಷ ಮೌಲ್ಯದ ಅಕ್ರಮ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿ ಜಂಗಿಲಿ ರಾಮು ಜೆ. ಪಾಮನ್ನಾ ಈತನನ್ನು ಬಂಧಿಸಿ, ದಸ್ತಗೀರ್ ಮಾಡಲಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button