Important
Trending

ಬಸ್, ಕಾರಿನ ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಶಿರಸಿ: ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿರಸಿ ಕುಮಟಾ ಹೆದ್ದಾರಿಯ ಬಂಡಲದ ಸಮೀಪ ಶುಕ್ರವಾರ ನಡೆದಿದೆ. ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್​​​​​ ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಬೆಳಗ್ಗೆ 11 ಗಂಟೆಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿದ್ದ ವ್ಯಕ್ತಿಗಳು ಮಂಗಳೂರು ಸಮೀಪದವರು ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡ ವ್ಯಕ್ತಿ ತಮಿಳುನಾಡಿನ ವಿಳಾಸದವರು ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನ ಚಾಲಕರು ಅಪಾಯದಿಂದ ಪಾರಾಗಿದ್ದಾರೆ. ಜೊತೆಗೆ ಬಸ್​ನಲ್ಲಿ 60ಕ್ಕೂ ಅಧಿಕ ಪ್ರಯಾಣಿಕರು ಇದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ವ್ಯಕ್ತಿಗಳ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸುವ ಕೆಲಸ ನಡೆದಿದೆ. ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button