Follow Us On

WhatsApp Group
Important
Trending

ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲೆ ಮಲ್ಟಿಸ್ಪೇಷಲಿಟಿ ಆಸ್ಪತ್ರೆ ನಿರ್ಮಾಣವಾಗಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

ಹೊನ್ನಾವರ: ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲೆ ಮಲ್ಟಿಸ್ಪೇಷಲಿಟಿ ಆಸ್ಪತ್ರೆ ನಿರ್ಮಾಣವಾಗಲಿ ಎಂದು ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೊನ್ನಾವರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಜಿಲ್ಲೆಯ ನಾಲ್ಕು ಶಾಸಕರು ಅಧಿವೇಶನದಲ್ಲಿ ವಿವಿಧಡೆ ಆಸ್ಪತ್ರೆ ಸ್ಥಳ ನಿಗಧಿಸುವಂತೆ ಒತ್ತಾಯದ ಕುರಿತು ಪ್ರತಿಕ್ರಿಯೆ ನೀಡಿದ ಅವರು ಜಿಲ್ಲೆಗೆ ತೀರಾ ಅಗತ್ಯವಾಗಿ ಬೇಕಾಗಿರುದು ಆಸ್ಪತ್ರೆಯಾಗಿದೆ.

ಈ ಹಿಂದೆ ಬಿಜೆಪಿ ಸರ್ಕಾರ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲಿ ಮಾಡುವುದಾಗಿ ತಿಳಿಸಿತ್ತು. ಇದೀಗ ರಾಜ್ಯ ಸರ್ಕಾರ ಇಲ್ಲಿಯೇ ಮಾಡಬೇಕು. ಜಿಲ್ಲೆಯ ಮಧ್ಯವರ್ತಿ ಸ್ಥಳ ಕುಮಟಾ ಹೆಚ್ಚು ಸೂಕ್ತವಾಗಿದೆ. ಇಲ್ಲಿ ನಿರ್ಮಿಸಿ, ಉಳಿ ತಾಲೂಕಿನ ಆಸ್ಪತ್ರೆಗಳಲ್ಲಿ ಏನೆನು ಅಗತ್ಯವಿದೆಯೋ ಅಲ್ಲಿ ಸೌಲಭ್ಯವನ್ನು ಕೂಡಲೇ ಒದಗಿಸಬೇಕು ಎಂದರು. ರಾಜ್ಯ ಸರ್ಕಾರದ ವೈಪಲ್ಯವನ್ನು ಎತ್ತಿ ಹಿಡಿಯಲು ಬಿಜೆಪಿ ವಿಫಲವಾಗಿದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ವಿಧಾನಸೌದದಲ್ಲಿ ಪಕ್ಷದಿಂದ ಆಯ್ಕೆಯಾದ ಶಾಸಕರ ಸಂಖ್ಯೆ ಕಡಿಮೆ ಇದ್ದರೂ, ಮತಗಳಿಕೆಯಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದೆ.

ಜಿಲ್ಲೆಯ ಉಸ್ತುವಾರಿ ಸಚೀವರು ಬರ ಅಧ್ಯಯನಕ್ಕೆ ಹೊಗುವ ಮೊದಲು ಬಿಜೆಪಿ ನಿಯೋಗ ಭೇಟಿ ನೀಡಿ ಜನತೆಯ ಧ್ವನಿಯಾಗಿ ಸರ್ಕಾರವನ್ನು ಎಚ್ಚರಿಸಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಾಗ ತರಾಟೆಗೆ ತೆಗೆದುಕೊಳ್ಳುವ ಮೂಲಕ ಸರ್ಕಾರವನ್ನು ಸರಿದಾರಿಗೆ ತರುವ ಕಾರ್ಯ ಮಾಡಿದೆ. ಅಧಿವೇಶನದಲ್ಲಿಯೂ ಈ ಬಗ್ಗೆ ಪ್ರಶ್ನಿಸಿ ಜನತೆಯ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೀವು ಸ್ಪರ್ಧೆ ಮಾಡುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ಪಕ್ಷ ಶಾಸಕನಾಗಿ ಮಂತ್ರಿಯಾಗಿ, ಸಭಾಪತಿ ಸ್ಥಾನ ನಿರ್ವಹಿಸಲು ಅವಕಾಶ ನೀಡಿದೆ.

ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಹಲವು ಜನಪರ ಕಾರ್ಯಕ್ರಮ ಅನುಷ್ಠಾನ ಮಾಡುತ್ತಿದ್ದು ಅದನ್ನು ಜನತೆ ಗುರುತಿಸಿ ಮೂರು ರಾಜ್ಯದಲ್ಲಿ ಆರ್ಶಿವಾದ ಮಾಡಿದ್ದು, ಮುಂದಿನ ದಿನದಲ್ಲೆ ಕೇಂದ್ರದಲ್ಲಿಯೂ ಬಿಜೆಪಿ ಸರ್ಕಾರ ಬರಲಿದ್ದು, ಪಕ್ಷದ ಹೈಕಮಾಂಡ್ ಟಿಕೇಟ್ ಹಂಚಿಕೆ ಮಾಡಲಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕ ಅಧ್ಯಕ್ಷ ರಾಜೇಶ ಭಂಡಾರಿ, ಮುಖಂಡರಾದ ಶಿವಾನಂದ ಹೆಗಡೆ ಕಡತೋಕಾ, ಮಂಜುನಾಥ ನಾಯ್ಕ, ಗಣಪತಿ ನಾಯ್ಕ ಬಿಟಿ, ವಿನೋದ ನಾಯ್ಕ ರಾಯಲಕೇರಿ, ಎಂ.ಎಸ್.ಹೆಗಡೆ, ಬಾಲಚಂದ್ರ ನಾಯ್ಕ, ಹರಿಶ್ಚಂದ್ರ ನಾಯ್ಕ, ಗೊವಿಂದ ಗೌಡ, ಕೃಷ್ಣ ಗೌಡ, ರಾಜೇಶ ಸಾಲೆಹಿತ್ತಲ್, ಮತ್ತಿತರರು ಇದ್ದರು.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button