Fresher Jobs: CAMPCO ನೇಮಕಾತಿ: ವೇತನ 27 ಸಾವಿರದಿಂದ 52 ಸಾವಿರ: ಇಂದೇ ಅರ್ಜಿ ಸಲ್ಲಿಸಿ
ಡಿಸೆಂಬರ್ 15, 2023 ಅರ್ಜಿ ಸಲ್ಲಿಕೆಗೆ ಕೊನೆಯ ದಿನ
ಮಂಗಳೂರಿನ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ) ನಲ್ಲಿ 11 ಹುದ್ದೆಗಳಿಗೆ ನೇಮಕಾತಿ (Fresher Jobs) ನಡೆಯಲಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಮಾಸಿಕ ವೇತನ 27 ಸಾವಿರದಿಂದ 52 ಸಾವಿರ ಇರಲಿದೆ ಎಂದು ಮಾಹಿತಿ ನೀಡಲಾಗಿದೆ. ಪದವಿ, ಬಿ,ಕಾಮ್, ಬಿಎಸ್ಸಿ, ಬಿಎ, ಬಿಬಿಎಮ್, ಡಿಪ್ಲೊಮಾ ಆದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೌದು, 11 ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ( Fresher Jobs) ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 15, 2023 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್- ಟ್ರೇನಿ: 10 ಹಾಗು ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಸ್ಟೆನೋ/ಪರ್ಸನಲ್ ಅಸಿಸ್ಟೆಂಟ್) 1 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬAಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕಳುಹಿಸಬೇಕಾದ ವಿಳಾಸ: ವ್ಯವಸ್ಥಾಪಕ ನಿರ್ದೇಶಕರು, ದಿ ಕ್ಯಾಂಪ್ಕೋ ಲಿಮಿಟೆಡ್, P.ಃ.ಓo:223, ವಾರಣಾಶಿ ಗೆ ಕಳುಹಿಸಬೇಕಾಗುತ್ತದೆ. ಟವರ್ಸ್”, ಮಿಷನ್ ಸ್ಟ್ರೀಟ್, ಮಂಗಳೂರು – 575001.
ಸಂಸ್ಥೆ | ಕ್ಯಾಂಪ್ಕೊ |
ಒಟ್ಟು ಹುದ್ದೆಗಳು | 11 |
ಅರ್ಜಿ ಸಲ್ಲಿಕೆಗೆ ಕೊನೆಯ ದಿನ | ಡಿಸೆಂಬರ್ 15, 2023 |
ಅರ್ಜಿ ಸಲ್ಲಿಕೆ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್