Important
Trending

ಕಾಲು ನೋವಿನ ಸಮಸ್ಯೆ: ಆತ್ಮಹತ್ಯೆಗೆ ಶರಣಾದ ವೃದ್ಧೆ

ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣು

ಭಟ್ಕಳ: ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧೆಯೋರ್ವಳು ಮನನೊಂದು ಮನೆಯ ಪಕ್ಕದ ಗೇರು ಮರದ ಸಮೀಪ ಬೆಂಕಿ ಹಾಕಿಕೊಂಡು ಸಾವಿಗೆ ಶರಣಾದ ಘಟನೆ ಮುಟ್ಟಳ್ಳಿ ಪಂಚಾಯತ್ ವ್ಯಾಪ್ತಿಯ ತಲಾಂದನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧೆ, ಈರಮ್ಮಾ ಮಾದೇವ ನಾಯ್ಕ ಎಂದು ತಿಳಿದು ಬಂದಿದೆ. ಈಕೆ ಕಳೆದ 3-4 ವರ್ಷದಿಂದ ತನಗಾದ ಕಾಲುನೋವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು. ಆದರೆ, ಕಾಲುನೋವು ವಾಸಿಯಾಗದೆ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯ ಪಕ್ಕದ ಗೇರು ತೋಟಕ್ಕೆ ತೆರಳಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾಳೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button