ಪ್ರಸಿದ್ಧ ನಾಗಕ್ಷೇತ್ರ ಮುಗ್ವಾದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ

ಹೊನ್ನಾವರ: ಪುರಾಣ ಪ್ರಸಿದ್ಧ ನಾಗಾರಾಧನೆಯ ಪುಣ್ಯತಾಣ ಎಂದೇ ಪ್ರಸಿದ್ಧಿ ಹೊಂದಿರುವ ಹೊನ್ನಾವರ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ನಡುವೆ ವಿಜೃಂಭಣೆಯಿoದ ನೇರವೇರಿತು.

ಶ್ರೀ ಸುಬ್ರಹ್ಮಣ್ಯ ದೇವಾಲದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಹಣ್ಣು-ಕಾಯಿ ಸೇವೆ, ಅರ್ಚನೆ, ಆರತಿ, ಅಭಿಷೇಕ, ಸರ್ವ ಸೇವೆ, ಪಂಚಖಾದ್ಯ ಸೇವೆ, ಲಾಡು ಪ್ರಸಾದ ಸೇವೆ ಸೇರಿದಂತೆ ವಿವಿಧ ಸೇವೆಯನ್ನು ಸಲ್ಲಿಸಿದರು. ಸಮೀಪದ ನಾಗಬನದಲ್ಲಿರುವ ನಾಗ ದೇವರಿಗೆ ಕ್ಷೀರಾಭಿಷೇಕ, ಆರತಿ ಮತ್ತು ಫಲಾಭಿಷೇಕ ಸೇರಿದಂತೆ ವಿವಿಧ ಸೇವೆ ಸಲ್ಲಿಸಲಾಯಿತು. ಭಕ್ತರು ಸರತಿ ಸಾಲಿನಲ್ಲಿ ದರ್ಶನ ಪಡೆಯುವುದಕ್ಕಾಗಿ ಪೆಂಡಾಲ್ ವ್ಯವಸ್ಥೆ, ಅಲ್ಲಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಾನಕದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸಚಿವರಾದ ಮಂಕಾಳ ವೈದ್ಯ, ಶಾಸಕ ದಿನಕರ ಶೆಟ್ಟಿ ಸೇರಿದಂತೆ ಜನಪ್ರತಿನಿಧಿಗಳು ಅಧಿಕಾರಿಗಳು ನಾಡಿನ ಮೂಲೆಮೂಲೆಯಿಂದ ಆಗಮಿಸಿದ ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ತಮ್ಮ ಇಷ್ಟಾರ್ಥ ಪ್ರಾಪ್ತಿಗಾಗಿ ಸಂಕಲ್ಪಿಸಿಕೊoಡು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು. ಪೂಲಿಸ್ ಇಲಾಖೆ ಬಿಗಿ ಬಂದವಸ್ತ ಕಲ್ಪಿಸಿತ್ತು.

ಈ ಸಂಧರ್ಭದಲ್ಲಿ ಮಾಧ್ಯಮದವರೋಂದಿಗೆ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಮಾತನಾಡಿ ಮುಗ್ವಾ ಸುಭ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿ ವರ್ಷ ಚಂಪಾಸೃಷ್ಠಿಯ ದಿನದಂದು ಭಕ್ತರು ಬಹಳ ದೋಡ್ಡ ಪ್ರಮಾಣದಲ್ಲಿ ಇಲ್ಲಿಗೆಬಂದು ಹರಕೆಯನ್ನು ಇಡೇರಿಸುವ ಕಾರ್ಯವನ್ನು ಮಾಡುತ್ತಿದ್ದಾರೆ, ಆಡಳಿತ ಮಂಡಳಿಯವರು ತುಂಭಾ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಎಂದರು.

ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಸ್.ಆರ್.ಹೆಗಡೆ ಮಾತನಾಡಿ ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿ ಅದ್ದೂರಿಯಾಗಿ ಚಂಪಾಷಷ್ಠಿ ಉತ್ಸವ ನಡೆಯಿತು, ಭಕ್ತರಿಗೆ ಅನೂಕೂಲವಾಗುವಂತೆ ಆಡಳಿತ ಮಂಡಳಿ ಕೈಗೊಳ್ಳಲಾಗಿತ್ತು. ಎಲ್ಲ ಭಕ್ತಾದಿಗಳ ಸರ್ವ ಇಷ್ಟಗಳನ್ನ ಸುಬ್ರಹ್ಮಣ್ಯ ಈಡೇರಿಸಲಿ ಎಂದು ಪ್ರಾರ್ಥಿಸಿದರು.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Exit mobile version