Join Our

WhatsApp Group
Important
Trending

ಎರಡು ಬೈಕ್ ಗಳ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಭಟ್ಕಳ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಾಯಗೊಂಡಿರುವ ಘಟನೆ ಸಾಗರ ರಸ್ತೆಯ ತ್ಯಾಜ್ಯ ವಿಲೇವಾರಿ ಸಂಸ್ಕರಣಾ ಘಟಕ ಸಮೀಪ ನಡೆದಿದೆ. ಮೃತ ವ್ಯಕ್ತಿ, ಶ್ರೀಧರ ಜಟ್ಟಪ್ಪ ನಾಯ್ಕ ಯಲ್ವಡಿಕವೂರ ನಿವಾಸಿ ಎಂದು ತಿಳಿದು ಬಂದಿದೆ.

ಈತ ಭಟ್ಕಳ ಕಡೆಯಿಂದ ಮಾರುಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಕುಂಟವಾಣಿ ಕಡೆಯಿಂದ ಭಟ್ಕಳ ಕಡೆಗೆ ಅತೀವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿಕೊಂಡು ಬಂದಿದ್ದು, ವೇಗವನ್ನು ನಿಯಂತ್ರಿಸಲಾಗದೇ ಬೈಕಿಗೆ ಡಿಕ್ಕಿಹೊಡೆದಿದ್ದಾನೆ. ಅಪಘಾತದ ಪರಿಣಾಮ ಬೈಕ್ ಸವಾರನ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button