Important
Trending

ಬೈಕ್‌ಗೆ ಡಿಕ್ಕಿ ಹೊಡೆದ ಕಾರು: ಬೈಕ್ ಸವಾರ ಸಾವು

ಅಂಕೋಲಾ: ವರದರಾಜ ಹೊಟೇಲ್ ಹತ್ತಿರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಬೈಕಿಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟು ಹಿಂಬದಿಯಲ್ಲಿ ಕುಳಿತಿದ್ದ ಹತ್ತು ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕೃಷ್ಣಾಪುರ ನಿವಾಸಿ ನಜೀರ್ ಹಸನ್ ಮಿಯಾ(44) ಮೃತ ದುರ್ದೈವಿಯಾಗಿದ್ದಾನೆ., ಆತನ ತಂಗಿಯ ಮಗ ಹುಬ್ಬಳ್ಳಿ ನಿವಾಸಿ ಅಬ್ದುಲ್ ರೆಹಮಾನ(10) ಎಂಬಾತನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ.

ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ ಅಂಕೋಲಾ ಕಡೆಯಿಂದ ಕಾರವಾರ ಕಡೆ ಅತಿ ವೇಗದಲ್ಲಿ ಬೈಕ್ ಚಲಾಯಿಸಿ ಬಂದು ರಾಷ್ಟ್ರೀಯ ಹೆದ್ದಾರಿ ಡಿವೈಡರ್ ನಡುವೆ ಇರುವ ರಸ್ತೆಯಲ್ಲಿ ಯಾವುದೇ ಸಿಗ್ನಲ್ ನೀಡದೇ ಬೈಕನ್ನು ಎಡದಿಂದ ಬಲಕ್ಕೆ ತಿರುಗಿಸಿದ ಸಂದರ್ಭದಲ್ಲಿ ಹಿಂಬದಿಯಿoದ ಬರುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ನಜೀರ್ ಹಸನ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದ ಕಾರಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಸ್ಮಯ ನ್ಯೂಸ್, ವಿಲಾಸ ನಾಯಕ, ಅಂಕೋಲಾ

Back to top button