Follow Us On

Google News
Important
Trending

ಉತ್ತರಕನ್ನಡ ಜಿಲ್ಲೆಯಲ್ಲಿ ಸದ್ದಿಲ್ಲದೇ ಕಾಣಿಸಿಕೊಳ್ಳುತ್ತಿರುವ ಕೋವಿಡ್: ಹೊರರಾಜ್ಯಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು

ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ದಿಲ್ಲದೇ ಇಲ್ಲಿಯವರೆಗೆ ಮೂವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಓರ್ವ ಸೋಂಕಿತರು ಗುಣಮುಖರಾಗಿದ್ದು, ನಂತರ ಅಜ್ಜ ಹಾಗೂ ಮೊಮ್ಮಗನಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇಬ್ಬರೂ ಸೋಂಕಿತರು ಹೋಮ್ ಐಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಡಿಸೆಂಬರ್ 10 ರಂದು ಕಾರವಾರದ ಸದಾಶಿವಗಡದ ವ್ಯಕ್ತಿಯೋರ್ವರಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದ್ದರೆ, ಡಿಸೆಂಬರ್ 26 ರಂದು ಶಿರಸಿ ತಾಲೂಕಿನ ಗ್ರಾಮೀಣ ಪ್ರದೇಶದ 74 ವರ್ಷದ ವೃದ್ಧರೋರ್ವರಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ನಂತರ ಡಿಸೆಂಬರ್ 27 ರಂದು ಇವರ 16 ವರ್ಷದ ಮೊಮ್ಮಗನಲ್ಲೂ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಇಬ್ಬರಲ್ಲೂ ನೆಗಡಿ, ಕೆಮ್ಮು, ಜ್ವರದ ಸಾಮಾನ್ಯ ಲಕ್ಷಣಗಳಿದ್ದು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ತಾಲೂಕಾ ಆಸ್ಪತ್ರೆಗಳ ಮೂಲಕ ಪ್ರತಿ ದಿನ 120 ಕೋವಿಡ್ ಪರೀಕ್ಷೆ ನಡೆಸುವ ಗುರಿಯನ್ನು ನೀಡಿತ್ತು. ಆದರೆ ಸದ್ಯ ಈ ಗುರಿ ಮೀರಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇನ್ನು ಕೋವಿಡ್ ಹರಡುವಿಕೆ ಸಂಬAದಿಸಿದAತೆ ಕುಮಟಾ ತಾಲೂಕಿನಲ್ಲಿ ಎಲ್ಲಾ ರೀತಿಯ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ.

ರೋಗ ಲಕ್ಷಣ ಇದ್ದರಿಗೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸಲಾಗುತ್ತಿದೆ. ಕುಮಟಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಪ್ರಮುಖವಾಗಿ ಗೋವಾ, ಕೇರಳದಿಂದ ಬಂದವರನ್ನು ಪರೀಕ್ಷೆ ಮಾಡಲಾಗುತ್ತಿದೆ. ಅದರಲ್ಲಿಯೂ ಪ್ರಮುಖವಾಗಿ ಶಬರಿಮಲೆ ತೀರ್ಥಯಾತ್ರೆಗೆ ಹೋಗಿ ಬರುವ ಅಯ್ಯಪ್ಪ ಸ್ವಾಮಿ ಮಲಾಧಾರಿಗಳನ್ನು ಪರೀಕ್ಷೆ ಮಾಡಲಾಗುತ್ತಿದೆ. ಇದುವರೆಗೆ ಕುಮಟಾ ತಾಲುಕಿನಲ್ಲಿ ಯಾವುದೇ ಕೋವಿಡ್ ಪ್ರಕರಣ ಪತ್ತೆಯಾಗಿಲ್ಲ ಎಂದು ಕುಮಟಾ ತಾಲೂಕಾ ಆರೋಗ್ಯಾಧಿಕಾರಿಗಳಾದ ಆಜ್ಞಾ ನಾಯಕ ಅವರು ನಮ್ಮ ವಿಸ್ಮಯ ಟಿ.ವಿ ಗೆ ಮಾಹಿತಿ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Back to top button