Big News
Trending

ಕೆನರಾ ಲೋಕಸಭಾ ಕ್ಷೇತ್ರಕ್ಕೆ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಗೆಲುವಿಗೆ ಶ್ರಮಿಸುತ್ತೇವೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಕೆನರಾ ಲೋಕಸಭಾ ಕ್ಷೇತ್ರಕ್ಕೆ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಸೋಮವಾರ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ. ಅಭ್ಯರ್ಥಿಗಳ ಆಯ್ಕೆ ವರಿಷ್ಠರಿಗೆ ಬಿಟ್ಟ ವಿಚಾರ.ವರಿಷ್ಠರು ಯಾರಿಗೆ ಟಿಕೆಟ್ ನೀಡದರೂ ಅವರ ಗೆಲುವಿಗೆ ನಾವು ಶ್ರಮಿಸುತ್ತೇವೆ. 2024ರಲ್ಲಿ ಮತ್ತೇ ನರೇಂದ್ರ ಮೋದಿ ಯವರು ದೇಶದ ಪ್ರಧಾನಿ ಯಾಗಬೇಕು.

ಆದ್ದರಿಂದ ಪಕ್ಷ ಸಂಘಟನೆಗೆ ಬೇಕಾದ ಚಟುವಟಿಕೆಗಳು ನಡೆಸುತ್ತಿದ್ದೇವೆ ಎಂದರು. ಜ.22ರಂದು ಅಯೋಧ್ಯೆ ಯಲ್ಲಿ ನಿರ್ಮಾಣ ಗೊಂಡ ಭವ್ಯ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠೆ ಕಾರ್ಯ ನಡೆಯಲಿದೆ.ನಮ್ಮ ಹಿರಿಯರ ತ್ಯಾಗ, ಬಲಿದಾನ, ಹೋರಾಟ ದಿಂದ ಇಂದು ಭವ್ಯ ರಾಮ ಮಂದಿರ ನಿರ್ಮಾಣ ವಾಗಿದೆ. ಇಂದಿನಿAದ ಮನೆಮನೆಗೆ ಅಕ್ಷತೆ ಕೊಡುವ ಕಾರ್ಯಕ್ರಮ ಪ್ರಾರಂಭವಾಗಿದೆ .15 ದಿನಗಳಕಾಲ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ .ಜ.22ರಂದು ಪ್ರತಿ ದೇವಸ್ಥಾನದಲ್ಲೂ ಪೂಜೆ ಪುನಸ್ಕಾರ ಗಳನ್ನು ಆಯೋಜಿಸಲಾಗಿದೆ.ಸಂಜೆ ದೀಪ ಬೆಳಗಿಸಿ ದೀಪಾವಳಿ ಆಚರಿಸುವಂತೆ ಕರೆ ನೀಡಿದರು.

ವಿಸ್ಮಯ ನ್ಯೂಸ್, ಶಿರಸಿ

Back to top button