Focus News
Trending

ಬಿಜೆಪಿಯವರದ್ದು ಬೋಗಸ್ ಭಕ್ತಿ: ಸಚಿವ ಮಂಕಾಳ್ ವೈದ್ಯ

ಕಾರವಾರ: ಬಿಜೆಪಿಯವರು ರಾಜಕಾರಣಕ್ಕೋಸ್ಕರ ಏನು ಬೇಕಾದರೂ ಮಾಡುತ್ತಾರೆ. ಗಲಭೆ ಮಾಡೋದು, ಸುಳ್ಳು ಹೇಳೋದು, ದೇವರ ಹೆಸರಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವುದು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಕುರಿತು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಬಿಜೆಪಿಯವರದ್ದು ಬೋಗಸ್ ಭಕ್ತಿ.. ರಾಮಮಂದಿರ ಉದ್ಘಾಟನೆ ಆಗದೇ ಮಂತ್ರಾಕ್ಷತೆಯನ್ನು ಕೊಡುತ್ತಿದ್ದಾರೆ. ಪೂಜೆಯೇ ಆಗದೇ ಮಂತ್ರಾಕ್ಷತೆ ಹೇಗೆ ಕೊಡುತ್ತಾರೆ ಇವರು? ಅಕ್ಷತೆ ಕೊಟ್ಟು, ಮಂತ್ರಾಕ್ಷತೆ ಕೊಟ್ಟು ಕರೆಯುವುದೇನೋ ಸರಿ. ಯಾಕೆ ಮೋದಿ ಫೋಟೋ, ಕಟೌಟ್ ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಅಕ್ಷತೆ ಕೊಡುವಲ್ಲಿ ನರೇಂದ್ರ ಮೋದಿ ವಿಚಾರ ಏಕೆ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ವಿಸ್ಮಯ ನ್ಯೂಸ್, ಕಾರವಾರ

Back to top button