ಯಲ್ಲಾಪುರ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ವಜ್ರಳ್ಳಿಯಲ್ಲಿ ನಡೆದಿದೆ. ಬೈಕ್ ಸವಾರ ವಜ್ರಳ್ಳಿಯ ನವೀನ ಮಹಾದೇವ ಗೌಡ (30) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಯಲ್ಲಾಪುರ ಕಡೆಯಿಂದ ಕೈಗಾ ಕಡೆಗೆ ಹೊರಟಿದ್ದ ಟಾಟಾ ಏಸ್, ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಜಖಂಗೊoಡಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಯಲ್ಲಾಪುರ