Follow Us On

Google News
Job News
Trending

NTPC Limited Recruitment: ಕೇಂದ್ರ ಸರ್ಕಾರಿ ಉದ್ಯೋಗ: 223 ಹುದ್ದೆಗಳು: ಇಂದೇ ಅರ್ಜಿ ಸಲ್ಲಿಸಿ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (NTPC Limited Recruitment) ಖಾಲಿಯಿರುವ ಹಲವು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 223 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಆರಂಭಿಕ ವೇತನ 55 ಸಾವಿರ ಇರಲಿದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.

ಸಾಮಾನ್ಯ ವಿಭಾಗಕ್ಕೆ 98 ಮತ್ತು ಇಡಬ್ಲ್ಯುಎಸ್ ವಿಭಾಗಕ್ಕೆ 22, ಎಸ್‌ಸಿ ವಿಭಾಗಕ್ಕೆ 39, ಎಸ್‌ಟಿ ವಿಭಾಗಕ್ಕೆ 24 ಹಾಗು ಒಬಿಸಿ ವಿಭಾಗಕ್ಕೆ 40 ಹುದ್ದೆಗಳಿವೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷವಾಗಿದೆ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 8, 2024.

ಇಲಾಖೆನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು223
ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕಫೆಬ್ರವರಿ 8, 2024

( NTPC Limited Recruitment) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿoಗ್‌ನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸಹಾಯಕ ಕಾರ್ಯನಿರ್ವಾಹಕ (ಕಾರ್ಯಾಚರಣೆ) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೇಂದ್ರ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಂದೇಶ್ ಎನ್ ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

Back to top button
Idagunji Mahaganapati Chandavar Hanuman