ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್: ಈಗಾಗಲೇ ಐಸಿಎಂಆರ್ ಜೊತೆ ಚರ್ಚೆ: ಆರೋಗ್ಯ ಸಚಿವರಿಂದ ಮಾಹಿತಿ

ಕಾರವಾರ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡುರಾವ್ ಅವರು ತಿಳಿಸಿದ್ದಾರೆ. ಮಂಗನ ಕಾಯಿಲೆ ನಿಯಂತ್ರಣದ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಮಂಗನ ಕಾಯಿಲೆ ಈ ಹಿಂದೆ ಬಳಸುತ್ತಿದ್ದ ವ್ಯಾಕ್ಸಿನ್ ಬಳಕೆ ಮಾಡಬೇಡಿ ಎಂದು ಸೂಚಿಸಲಾಗಿದೆ. ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ.

ಐಸಿಎಂಆರ್ ಅವರು ಹೊಸ ವ್ಯಾಕ್ಸಿನ್ ತಯಾರಿಕೆಗೆ ಒಪ್ಪಿಗೆ ನೀಡಿದ್ದು ಹೈದರಾಬಾದ್ ಮೂಲದ ಸಂಸ್ಥೆ ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸುತ್ತದೆ. ಮುಂದಿನ ವರ್ಷದ ಒಳಗಾಗಿ ಈ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಮಳೆಗಾಲದ ಆರಂಭ ಹಾಗೂ ಅಂತ್ಯದಲ್ಲಿ ಈ ಮಂಗನ ಕಾಯಿಲೆಯು ಹೆಚ್ಚಳವಾಗುತ್ತಿದೆ. ಮಾರ್ಚ ತಿಂಗಳಿನವರೆಗೆ ಜನರು ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಕಾಯಿಲೆಯ ಲಕ್ಷಣಗಳು ಕಾಣಿಸಿದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು. ಮಂಗನ ಕಾಯಿಲೆಗೆ ಎಬಿಎಆರ್‌ಕೆ ಫಂಡ್‌ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ ಎಂದು ಸಚಿವರು ಮಹಿತಿ ನೀಡಿದರು. ಅದಲ್ಲದೆ ಕೆಎಫ್‌ಡಿ ಪಾಸಿಟಿವ್ ಬಂದವರನ್ನು ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ನೀಡಲು ಸೂಚಿಸಲಾಗಿದೆ.

ರಾಜ್ಯದ ಚಿಕ್ಕಮಗಳೂರು, ಶಿವಮೊಗ್ಗ, ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಕೆಎಫ್‌ಡಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಈಗಾಗೇ ಒಟ್ಟು 70 ಕೆಎಫ್‌ಡಿ ಪ್ರಕರಣಗಳು ವರದಿಯಾಗಿದೆ. ಹಲವರು ಚಿಕಿತ್ಸೆ ಪಡೆದು ಈಗಾಲೇ ಗುಣಮುಖರಾಗಿದ್ದು, 20 ಸಕ್ರೀಯ ಪ್ರಕರಣಗಳು ಇವೆ. ಇಬ್ಬರು ಸಾವನ್ನಪ್ಪಿದ್ದು, ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿಗೀಡಾದ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗಿದೆ. ಎಂದು ಸಚಿವರು ಮಾಹಿತಿ ನೀಡಿದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್…

Exit mobile version