Big News
Trending

ಕ್ಯೂಆರ್ ಕೋಡ್ ಮೂಲಕ ಹಣಪಾವತಿಸುವ ವ್ಯವಸ್ಥೆ : ಉತ್ತರ ಕನ್ನಡ ವಿಭಾಗದಲ್ಲಿ ಪ್ರಪ್ರಥಮ ಬಾರಿಗೆ ಜಾರಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿನೂತನ ಪ್ರಯೋಗ -

ಶಿರಸಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ ವಿಭಾಗದಲ್ಲಿ ಪ್ರಪ್ರಥಮ ಬಾರಿಗೆ ಬಸ್ಸಿನಲ್ಲಿ ನಿರ್ವಾಹಕರು ನೀಡುವ ಟಿಕೇಟುಗಳನ್ನು ಕ್ಯೂಆರ್ ಕೋಡ್ ಮೂಲಕ ಪಡೆಯುವಂತ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಸಂಸ್ಥೆಯ ವಿಭಾಗೀಯ ನಿಯಂತ್ರಣ ಅಧಿಕಾರಿ ಕೆ ಶ್ರೀನಿವಾಸ್ ನಗರದ ಹೊಸ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ವ್ಯವಸ್ಥೆಗೆ ಚಾಲನೆ ನೀಡಿದರು.

ನಗದು ಹಣ ಇಲ್ಲದೇ ಹೋದಲ್ಲಿ ಕ್ಯೂಆರ್ ಕೋಡ್ ಮೂಲಕ ಪ್ರಯಾಣಿಕರ ಟಿಕೆಟ ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಈ ವ್ಯವಸ್ಥೆಯ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಶ್ರೀನಿವಾಸ್ ಕರೆ ನೀಡಿದರು. ಈ ಸಂದರ್ಭದಲ್ಲಿ ವಿಭಾಗದ ಅಧಿಕಾರಿಗಳಾದ ಸರ್ವೇಶ್, ರವಿ ಕಬ್ಬೇರ್, ಪ್ರವೀಣ್ ಶೇಟ, ಕಿರಣ್ ನಾಯಕ್ ಹಾಜರಿದ್ದರು.

ವಿಸ್ಮಯ ನ್ಯೂಸ್, ಶಿರಸಿ

Back to top button