ಟಾಟಾ ಏಸ್ ಮತ್ತು ಆಟೋ ನಡುವೆ ಭೀಕರ ಅಪಘಾತ: ನಾಲ್ವರು ಗಂಭೀರ

ಭಟ್ಕಳ: ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಬoಧಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಬೆಳಕೆಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮೀನುಗಾರ ಮಹಿಳೆ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಗಾಯಗೊಂಡ ನಾಲ್ವರಲ್ಲಿ ಇಬ್ಬರನ್ನ ಮಣಿಪಾಲ ಮತ್ತು ಇನ್ನಿಬ್ಬರನ್ನ ಕುಂದಾಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊoಡಿದೆ.. ಆಟೋ ಬೆಳಕೆ ಕಡೆಯಿಂದ ಭಟ್ಕಳದ ಕಡೆ ಬರುತ್ತಿದ್ದು, ಟಾಟಾ ಏಸ್ ಭಟ್ಕಳದಿಂದ ಶಿರೂರು ಕಡೆ ತೆರಳುತ್ತಿತ್ತು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಭಟ್ಕಳ

Exit mobile version