ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ದಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27 ರಂದು ಬೃಹತ್ ಉದ್ಯೋಗ ( Job fair) ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನಿರ್ದಿಷ್ಠ ವಿದ್ಯಾರ್ಹತೆ ಮತ್ತು ವಯೋಮಿತಿ ಇಲ್ಲ. ಎಸ್‌ಎಸ್‌ಎಲ್‌ಸಿ ಪಾಸ್ ಅಥವಾ ಫೇಲ್ ಆದವರೂ ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.
( Job fair) ಈ ಮೇಳದಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಒದಗಿಸಲಾಗುತ್ತಿದೆ. 500ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಇದರಲ್ಲಿ ಭಾಗವಹಿಸುತ್ತಿದೆ. ವಿಶೇಷ ಅಂದ್ರೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪತ್ರಗಳ ವಿತರಣೆ ನಡೆಯಲಿದೆ. ಆಯ್ಕೆಯಾದ ಎಲಾ ್ಲ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಕಾರ್ಮಿಕ ವೇತನದ ನಿಯಮದಂತೆ ಕನಿಷ್ಠ ವೇತನದ ಜೊತೆಗೆ ಗರಿಷ್ಠ ಆಕರ್ಷಕ ವೇತನದ ಕೂಡ ಲಭ್ಯವಾಗಲಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು https://udyogamela.skillconnect.kaushalkar.com/ext/form/1691/1/apply ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕಿದೆ. ಈ ಕುರಿತು ಯಾವುದೇ ಗೊಂದಲಗಳಿದ್ದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ 1800 599 9918 ಗೆ ಬೆಳಗ್ಗೆ 10 ರಿಂದ 6ರ ವರೆಗೆ ಸಂಪರ್ಕಿಸಬಹುದು. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರನ್ನು ನೋಂದಾಯಿಸಿಕೊoಡು, ಮೇಳದಲ್ಲಿ ಭಾಗವಹಿಸಬಹುದಾಗಿದೆ. ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ದಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ Webite Link; ಇಲ್ಲಿ ಕ್ಲಿಕ್ ಮಾಡಿ.
ಸ್ಥಳ | ಬೆಂಗಳೂರು ಅರಮನೆ ಮೈದಾನ |
ದಿನಾಂಕ | ಫೆಬ್ರವರಿ 26 ಮತ್ತು 27 |
ವಿದ್ಯಾರ್ಹತೆ | ಎಸ್‌ಎಸ್‌ಎಲ್‌ಸಿ ಪಾಸ್ ಅಥವಾ ಫೇಲ್ |
ಹೆಸರು ನೋಂದಾಯಿಸಿಕೊಳ್ಳಲು | ಇಲ್ಲಿ ಕ್ಲಿಕ್ ಮಾಡಿ |
ಸಂಪರ್ಕ ಸಂಖ್ಯೆ | 1800 599 9918 |
ಉದ್ಯೋಗ ಮೇಳಕ್ಕಾಗಿ ಅಭ್ಯರ್ಥಿಗಳ ನೋಂದಣಿ ನಮೂನೆಯಾಗಿದೆ. ಉದ್ಯೋಗ ಮೇಳ / ಉದ್ಯೋಗಾವಕಾಶಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು 1800 599 9918 ವಿಸ್ತರಣಾ ಸಂಖ್ಯೆ(4) ಗೆ ಸಂಪರ್ಕಿಸಿ ಅಥವಾ [email protected] ಗೆ ಇಮೇಲ್ ಮಾಡಿ.
ಇನ್ನು ಹೆಚ್ಚಿನ ಉದ್ಯೋಗಾವಕಾಶ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್