Important
Trending

ಮರಳು ಕಳ್ಳ ಸಾಗಣೆ ಮಾಡುತ್ತಿದ್ದ ವೇಳೆ ಅವಾಂತರ: ಟ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸಾವು

ಜೋಯಡಾ: ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಪಣಸೋಲಿ ವ್ಯಜೀವಿ ವಲಯದಲ್ಲಿ ರಾತ್ರಿ ಉಸುಕು ಕಳ್ಳ ಸಾಗಣೆ ಮಾಡುತ್ತಿರುವ ಟ್ಯಾಕ್ಟರ್ ಉರುಳಿ ಬಿದ್ದು ಚಾಲಕ ವಿಶ್ವನಾಥ ಪುರಶೋತ್ತಮ ಆಚಾರಿ ಮೃತಪಟ್ಟಿದ್ದಾನೆ. ತಡರಾತ್ರಿ 12 ಗಂಟೆಯ ಸುಮಾರಿಗೆ ಪಣಸೋಲಿಯಿಂದ ಸಪಾರಿ ಹೋಗುವ ರಸ್ತೆಯ ಪಕ್ಕ ಟ್ಯಾಕ್ಟರ್ ಉರುಳಿ ಬಿದ್ದು ಅದರಡಿ ಸಿಲುಕಿ ಚಾಲಕ ಮೃತಪಟ್ಟಿದ್ದಾನೆ. ಇದೇ ವೇಳೆ, ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ವಿಸ್ಮಯ ನ್ಯೂಸ್, ಜೋಯಡಾ

Back to top button