ಹಿಂಬದಿಯಿಂದ ಡಿಕ್ಕಿಹೊಡೆದ ಟಿಪ್ಪರ್: ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವು

ಭಟ್ಕಳ: ಬೈಕಿಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತಾಲೂಕಿನ ವೆಂಕ್ಟಾಪುರ ಬ್ರಿಡ್ಜ್ ಸಮೀಪ ನಡೆದಿದೆ. ಮೃತ ಬೈಕ್ ಸವಾರ, ಪಿ.ಟಿ, ಚಾಕುಚ್ಚನ್ ಉತ್ತರಕೊಪ್ಪಾ ಗೋಳಿಕುಂಬ್ರಿ ನಿವಾಸಿ ಎಂದು ತಿಳಿದು ಬಂದಿದೆ. ಟಿಪ್ಪರ್ ಚಾಲಕ ಶಿವನ ಗೌಡ ಸುರೇಶ ಗೌಡ ಪಾಟೀಲ್ ಭಟ್ಕಳ ಕಡೆಯಿಂದ ಮುರ್ಡೇಶ್ವರ ಕಡೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆ-66 ರಸ್ತೆಯಲ್ಲಿ ಅತೀವೇಗ ಹಾಗೂ ಅಜಾಗರೂಕತೆಯಿಂದ ಟಿಪ್ಪರ್ ಚಲಾಯಿಸಿಕೊಂಡ ವೇಳೆ ದುರ್ಘಟನೆ ಸಂಭವಿಸಿದೆ.

ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಬಲಗೈಗೆ ಗಂಭೀರ ಪ್ರಮಾಣದ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೆ.ಎಮ್.ಸಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಲ್ಲೇ ಸಾªನ್ನಪ್ಪಿದ್ದಾರೆ. ಮೃತನ ಪತ್ನಿ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಟಿಪ್ಪರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version