Important
Trending

ನಾನು ಲೋಕಸಭೆ ಚುನಾವಣೆಗೆ ನಿಲ್ಲುವುದಿಲ್ಲ: ಆರ್.ವಿ.ದೇಶಪಾಂಡೆ ಸ್ಪಷ್ಟನೆ

ಶಿರಸಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿ ಅಲ್ಲ, ನನ್ನ ಸ್ಪರ್ಧೆಯ ಕುರಿತು ಮಾಧ್ಯಮದವರು ಹೇಳುತ್ತಿದ್ದು ಪ್ರಚಾರ ಸಿಗುತ್ತದೆ ಎಂದು ಸುಮ್ಮನಿರುವುದಾಗಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಯಾರು ಸ್ಪರ್ಧೆ ಮಾಡಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ. ಯಾರೇ ಅಭ್ಯರ್ಥಿಯಾದರೂ ನಾವೆಲ್ಲರೂ ಸಹ ಕಷ್ಟಪಟ್ಟು ಅವರನ್ನು ಗೆಲ್ಲಿಸಬೇಕು ಎಂದರು.

ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಅಧಿಕ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಜಿಲ್ಲೆಯಲ್ಲಿ ಯಾರೇ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ಸಹ ಗೆಲುವು ನಮ್ಮದಾಗಲಿದೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. ದೇಶಕ್ಕೆ ಮೊದಲಬಾರಿ ಗ್ಯಾರಂಟಿ ಶಬ್ದವನ್ನು ಕೊಟ್ಟಿದ್ದು ಕಾಂಗ್ರೆಸ್, ಆದರೆ ಬಿಜೆಪಿಯವರು ಈ ಗ್ಯಾರಂಟಿಯನ್ನು ಟೀಕೆ ಮಾಡುತ್ತಿದ್ದಾರೆ ಎಂದರು.

ವಿಸ್ಮಯ ನ್ಯೂಸ್, ಶಿರಸಿ

Back to top button