Big News
Trending

ಸೇನಾಪಡೆಯಲ್ಲಿ ಅಗ್ನಿವೀರ ಸೇರ್ಪಡೆ: ತರಬೇತಿ ಜೊತೆಗೆ ನೆರವಿನ ಭರವಸೆ ನೀಡಿದ ಉತ್ತರಕನ್ನಡ ಜಿಲ್ಲಾಡಳಿತ

ಕಾರವಾರ: ಭಾರತೀಯ ಸೇನಾಪಡೆಯ ಅಗ್ನವೀರ್‌ಗೆ ಸೇರ್ಪಡೆಯಾಗ ಬಯಸುವ ಜಿಲ್ಲೆಯ ಯುವಕರಿಗೆ ಜಿಲ್ಲಾಡಳಿತದ ವತಿಯಿಂದ ಉಚಿತ ತರಬೇತಿ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಅಗ್ನಿವೀರರಾಗಿ ಸೇನಾಪಡೆ ಸೇರುವ ಮೂಲಕ ಆಕರ್ಷಕ ಸಾಹಸಮಯ ಉದ್ಯೋಗದ ಜೊತೆಗೆ ದೇಶರಕ್ಷಣೆಯ ಮಹಾನ್ ಕರ್ತವ್ಯಕ್ಕೆ ಜಿಲ್ಲೆಯ ಯುವಕರು ಮುಂದಾಗಬೇಕು. ಮಂಗಳೂರು ಸೇನಾ ನೇಮಕಾತಿ ಕಚೇರಿ ವತಿಯಿಂದ ಸೇನಾಪಡೆಯ ಅಗ್ನಿವೀರ್ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 13 ರಿಂದ ಮಾಚ್ 22 ರ ವರೆಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶವಿದೆ ಎಂದು ತಿಳಿಸಿದ್ದಾರೆ.

ಕನಿಷ್ಠ ಎಂಟನೇ ತರಗತಿಯಿಂದ ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಡಿಪ್ಲೊಮೋ, ಐ.ಟಿ.ಐ ವಿದ್ಯಾರ್ಹತೆ ಹೊಂದಿರುವ 17.5 ರಿಂದ 21 ವರ್ಷದೊಳಗಿನ ಜಿಲ್ಲೆಯ ಯುವ ಜನತೆ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಹತೆಗೆ ಅನುಗುಣವಾಗಿ ತಾಂತ್ರಿಕ ಮತ್ತು ಸಾಮಾನ್ಯ ಕರ್ತವ್ಯಗಳಿಗೆ ನೇಮಕಾತಿ ನಡೆಯಲಿದೆ. ಆರಂಭದಲ್ಲಿಯೇ 30 ಸಾವಿರ ಹಾಗೂ ನಂತರ 40 ಸಾವಿರದವರೆಗೆ ವೇತನ ಸಿಗಲಿದೆ. ಮೂರು ವರ್ಷದ ಬಳಿಕ ಸೇವೆ ಉತ್ತಮವಾಗಿದ್ದಲ್ಲಿ ಸೇನೆಯಲ್ಲಿ ಮುಂದುವರಿಯಲು ಅವಕಾಶಗಳಿದೆ ಎಂದು ಹೇಳಿದರು.

ವಿಸ್ಮಯ ನ್ಯೂಸ್, ಕಾರವಾರ

Back to top button