Kadambotsava: ಬನವಾಸಿಯಲ್ಲಿ ಮಾರ್ಚ್ 5 ಮತ್ತು 6 ರಂದು ಕದಂಬೋತ್ಸವ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಉತ್ಸವವಾದ ಕದಂಬೋತ್ಸವವನ್ನು (Kadambotsava) ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ವೈಭವದಿಂದ ಆಚರಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳಾದ ಗಂಗೂಬಾಯಿ ಮಾನಕರ ಅವರು ತಿಳಿಸಿದ್ದಾರೆ. ಕದಂಬೋತ್ಸವದ ಅಂಗವಾಗಿ ಮಾರ್ಚ್ 3 ರಂದು ಗುಡ್ನಾಪುರದಿಂದ ಕದಂಬ ಜ್ಯೋತಿ ಹೊರಡಲಿದ್ದು, ಆ ದಿನ ಸಂಜೆ ಗುಡ್ನಾಪುರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. (Kadambotsava) ಕದಂಬೋತ್ಸವದ ಅಂಗವಾಗಿ ನಡೆಯುವ ಕ್ರೀಡಾಸ್ಪರ್ಧೆಗಳ ನೋಂದಣಿಯನ್ನು ಫೆಬ್ರವರಿ 21 ರಿಂದ 25 ರವರೆಗೆ ಮಾಡಿಕೊಳ್ಳಬಹುದಾಗಿದೆ.

ಫೆ 27 ರಿಂದ 29 ರವರೆಗೆ ಎಲ್ಲಾ ಸ್ಪರ್ದೆಗಳು ನಡೆಯಲಿವೆ. ಸ್ಪರ್ಧೆಗಳ ನೊಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬುದಾಗಿದ್ದು, ಕುಸ್ತಿ, ಕಬಡ್ಡಿ, ವಾಲಿಬಾಲ್ ಸೇರಿದಂತೆ ಹಲವು ಕ್ರೀಡೆಗಳು ನಡೆಯಲಿದೆ ಎಂದರು. ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ಅತ್ಯಂತ ವೈಭವದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಕದಂಭೋತ್ಸವದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಬ್ಯುರೋ ರಿಪೋರ್ಟ್, ವಿಸ್ಮಯ ನ್ಯೂಸ್

Exit mobile version