1 ಸಾವಿರ ಗ್ರಾಮಲೆಕ್ಕಿಗ ಅಥವಾ ಗ್ರಾಮ ಆಡಳಿತಾಧಿಕಾರಿ (Village Accountant) ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪಿಯುಸಿ, ಡಿಪ್ಲೊಮಾ, ಐಟಿಐ ಆದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಯ ಮಾಹಿತಿಯಂತೆ ಮಾಸಿಕ ವೇತನ 21 ಸಾವಿರದಿಂದ 42 ಸಾವಿರ ಇರಲಿದೆ. ಒಟ್ಟು 1 ಸಾವಿರ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
Village Accountant Recruitment ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾರ್ಚ್ 4 ರಂದು ಬೆಳಗ್ಗೆ 11 ಗಂಟೆಯಿoದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 3 ಕೊನೆಯ ದಿನವಾಗಿದೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 750 ರೂಪಾಯಿ, ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ, ವಿಕಲ ಚೇತನ ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ ನಿಗದಿ ಮಾಡಲಾಗಿದೆ.
ಹುದ್ದೆ | ಗ್ರಾಮ ಆಡಳಿತ ಅಧಿಕಾರಿ |
ಹುದ್ದೆಗಳ ಸಂಖ್ಯೆ | 1 ಸಾವಿರ |
ವೇತನ | 21400 ರೂ-42000 ರೂ. |
ಅರ್ಜಿ ಸಲ್ಲಿಕೆ ಆರಂಭ | ಮಾರ್ಚ್ 4 , 2024 |
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | ಏಪ್ರಿಲ್ 3 , 2024 |
Village Accountant Recruitment ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯಸ್ಸಿನ ಮಿತಿ ನಿಗದಿ ಮಾಡಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ.
ವಿವರವಾದ ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಗ್ರಾಮ ಆಡಳಿತಾಧಿಕಾರಿ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ನೇಮಕಾತಿ ವಿವರ ಓದಲು | ಇಲ್ಲಿ ಕ್ಲಿಕ್ ಮಾಡಿ |
Village Accountant ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಮೊದಲು ಅಭ್ಯರ್ಥಿಗಳ ರ‍್ಯಾಂಕಿoಗ್ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್ ಮೂಲಕ ನಿಯೋಜನೆ ಗೊಳಿಸಲಾಗುತ್ತದೆ.
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ: ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಯು ಯಾವುದಾದರು ಒಂದು ಜಿಲ್ಲೆಗೆ ಮಾತ್ರ ಹುದ್ದೆ ಬಯಸಿ ಅರ್ಜಿಯನ್ನು ಸಲ್ಲಿಸಬೇಕು. ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿನ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ / ತಿದ್ದುಪಡಿಮಾಡಲು ಅವಕಾಶ ಇಲ್ಲ.. ಆದ್ದರಿಂದ ಅಭ್ಯರ್ಥಿಗಳು ಎಚ್ಚರಿಕೆಯಿಂದ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಸಂದೇಶ್ ಎನ್ ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್