Follow Us On

WhatsApp Group
Important
Trending

Anantkumar Hegde: ಸಿದ್ರಾಮುಲ್ಲಾ ಖಾನ್ ಎಂದಿದ್ದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಪ್ರಕರಣ ದಾಖಲು

ಮುಂಡಗೋಡು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂದಿದ್ದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂದಿದ್ದಕ್ಕೆ ಸುಮೊಟೋ ಪ್ರಕರಣ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಫೆಬ್ರವರಿ 23ರಂದು ಮುಂಡಗೋಡದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂಬ ಪದ ಬಳಕೆಯನ್ನು ಅನಂತ್‌ಕುಮಾರ್ ಮಾಡಿದ್ದರು.

ಈ ಹಿನ್ನಲೆಯಲ್ಲಿ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ, ರಾಜ್ಯ ಸರ್ಕಾರವನ್ನು ಟೀಕಿಸುವ ವೇಳೆ ಸಿದ್ರಾಮುಲ್ಲಾ ಖಾನ್ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ಟೀಕಿಸಿದ್ದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button